ಮಡಿಕೇರಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿನಿಯರನ್ನು ವಂಚಿಸಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸಿಲುಕಿರುವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ವಜಾಗೊಳಿಸಿ, ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ವಿಭಾಗ ಸಂಚಾಲಕರಾದ ಚೇತನ್ ಪಡಿಲ್ ಅವರ ನೇತೃತ್ವದಲ್ಲಿ ಹಲ ಕಾಲೇಜಿನ ವಿದ್ಯಾರ್ಥಿಗಳು ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ರಾಜ್ಯ ಕಾರ್ಯಕಾರಿಣಿ ಸದಸ್ಯೆ ವಿದ್ಯಾ ಮಾತನಾಡಿ, ಇತ್ತೀಚೆಗಷ್ಟೆ ಸುಮಾರು 35 ವಿದ್ಯಾರ್ಥಿನಿಯರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆರೋಪಿ ಗಣೇಶ್  ವಿದ್ಯಾರ್ಥಿಗಳಿಗೆ ವಂಚಿಸಿ ಲಕ್ಷಗಟ್ಟಲೆ ಹಣ ಪಡೆದುಕೊಂಡಿದ್ದಾನೆ. ಈ ಪ್ರಕರಣದಲ್ಲಿ ಕಾಲೇಜಿನ ಉಪನ್ಯಾಸಕರ ಹೆಸರು ಕೇಳಿಬಂದಿರುವುದಾಗಿ ತಿಳಿಸಿದರು.

ಈ ಪ್ರಕರಣದಿಂದ ಜಿಲ್ಲೆ ಹಾಗೂ ಕಾಲೇಜಿನ ಘನತೆಗೆ ಧಕ್ಕೆಯುಂಟಾಗಿದೆ. ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದರು ವಿಶ್ವವಿದ್ಯಾನಿಲಯ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಂಬಂಧಪಟ್ಟ ಉಪನ್ಯಾಸಕರನ್ನು ಹುದ್ದೆಯಿಂದ ವಜಾಗೊಳಿಸದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಆರೋಪಿ ಸ್ಥಾನದಲ್ಲಿರುವ ಉಪನ್ಯಾಸಕರನ್ನು ತಕ್ಷಣ ವಜಾಗೊಳಿಸಿ, ಸಿಐಡಿ ತನಿಖೆಗೆ ಒಳಪಡಿಸಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ಬಳಿಕ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್‍ರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ಸದಸ್ಯರಾದ ದರ್ಶನ್, ವಿನಿತ್, ಪಜಾ, ಸುಭಾಷ್ ಮತ್ತಿತರ ವಿದ್ಯಾರ್ಥಿಗಳು ಹಾಜರಿದ್ದರು.

Please follow and like us:
0
http://bp9news.com/wp-content/uploads/2017/08/Z-ABVP-PROTEST-1024x507.jpghttp://bp9news.com/wp-content/uploads/2017/08/Z-ABVP-PROTEST-150x150.jpgBP9 Bureauಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಕೊಡಗುಮಡಿಕೇರಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿನಿಯರನ್ನು ವಂಚಿಸಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸಿಲುಕಿರುವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ವಜಾಗೊಳಿಸಿ, ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ವಿಭಾಗ ಸಂಚಾಲಕರಾದ ಚೇತನ್ ಪಡಿಲ್ ಅವರ ನೇತೃತ್ವದಲ್ಲಿ ಹಲ ಕಾಲೇಜಿನ ವಿದ್ಯಾರ್ಥಿಗಳು ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ಮೆರವಣಿಗೆ...Kannada News Portal