ಬೆಂಗಳೂರು:ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಸೌಲಭ್ಯ ಮುಂದುವರಿಸುವ ಕುರಿತು ಚರ್ಚೆ ನಡೆಸುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ರಾಜ್ಯಾದ್ಯಂತ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಗಮನ ಸೆಳೆದಾಗ , ಈ ಸೌಲಭ್ಯ ನೀಡುವ ಕುರಿತು ಪರಿಶೀಲನೆ ನಡೆಸಬೇಕಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ ಅಂತಿಮ ಬಜೆಟ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಪಾಸ್ ಸೌಲಭ್ಯ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಆಕ್ಷೇಪ ವ್ಯಕ್ತಪಡಿಸಿ ಸಮ್ಮಿತಿ ನೀಡಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಈ ಯೋಜನೆಯನ್ನ ಸೇರಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದರು.

ಒಂದು ವೇಳೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದಲ್ಲಿ ಸಾರಿಗೆ ಇಲಾಖೆಗೆ ಸರ್ಕಾರ ವಾರ್ಷಿಕವಾಗಿ ಅನುದಾನ ನೀಡಬೇಕಾಗುತ್ತದೆ. ಅಲ್ಲದೆ, ಸಾರಿಗೆ ಸಂಸ್ಥೆಗಳು  626 ಕೋಟಿ ರೂಪಾಯಿ ನಷ್ಟ ಅನುಭವಿಸಬೇಕಾಗುತ್ತದೆ. ಈಗಾಗಲೆ ಸಾರಿಗೆ ನಿಗಮಗಳು 500 ಕೋಟಿ ರೂ ನಷ್ಟ ಅನುಭವಿಸುತ್ತಿವೆ ಎಂದರು.

ಇನ್ನು ಮುಂದೆ ಶಾಲಾ ಕಾಲೇಜುಗಳ ಆವರಣದಲ್ಲಿಯೂ ಬಸ್ ಪಾಸ್ ವಿತರಿಸುವ ಕೌಂಟರ್ ಗಳನ್ನು ತೆರೆಯಲಾಗುವುದು. ಅಲ್ಲದೆ, ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಕೌಂಟರ್ ಗಳಲ್ಲಿ ಹೆಚ್ಚುವರಿಯಾಗಿ ಬಸ್ ಪಾಸ್ ವಿತರಿಸುವ ಕೌಂಟರ್ ತೆರೆಯಲಾಗುವುದು. ಇದು ದೇಶದಲ್ಲಿಯೇ ಪ್ರಥಮ ಎಂದರು.

ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತರಗತಿಗಳಿಗೆ ಶುಲ್ಕ ಪಾವತಿಸಿ ದಾಖಲಾದಾಗ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸಮಗ್ರ ಮಾಹಿತಿ ಅಪ್ ಲೋಡ್ ಆಗಲಿದೆ. ನಂತರ ಸಾರಿಗೆ ಇಲಾಖೆಯ ವೆಬ್ ಸೈಟ್ ಗೆ ಜೋಡಣೆ ಆಗಲಿದೆ. ಅದನ್ನ ಅಧರಿಸಿ ಪಾಸ್ ಗಳನ್ನ ವಿತರಿಸಲಾಗುವುದು. ಮೊದಲಿನಂತೆ ವಿದ್ಯಾರ್ಥಿಗಳು ಬಸ್ ಪಾಸ್ಪ ಪಡೆಯಲು ಪರದಾಡಬೇಕಿಲ್ಲ ಎಂದು ಸಚಿವ ತಮ್ಮಣ್ಣ ತಿಳಿಸಿದರು.

ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ 600 ರೂ. ಬಾಲಕರಿಗೆ 800 ರೂ. ಕಾಲೇಜು ವಿದ್ಯಾರ್ಥಿಗಳಿಗೆ 1100 ರೂ.ಗಳನ್ನ ಬಸ್ ಪಾಸ್ ಪಡೆಯಲು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 200 ರೂ. ಸಂಸ್ಕರಣಾ ಶುಲ್ಕವನ್ನ ಪಾವತಿಸಬೇಕು ಎಂದರು. ಖಾಸಗಿ ಬಸ್ ಮಾಲೀಕರು ಬಸ್ ನಿಲ್ದಾಣಗಳಲ್ಲಿ ಇಲ್ಲದಿದ್ದಲ್ಲಿ ಬೆಂಗಳೂರು ಹೊರ ಭಾಗದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದರು. ನಗರದಲ್ಲಿ ಬಲವಂತವಾಗಿ ಸಮೂಹ ಸಾರಿಗೆ ವ್ಯವಸ್ಥೆಯನ್ನಬಳಸಬೇಕು ಎಂದು ಒತ್ತಡ ಏರಲಾಗುವುದಿಲ್ಲ ಎಂದು ತಿಳಿಸಿದರು.

 

 

 

 

 

Please follow and like us:
0
http://bp9news.com/wp-content/uploads/2018/06/D.-C.-Thammanna.jpghttp://bp9news.com/wp-content/uploads/2018/06/D.-C.-Thammanna-150x150.jpgBP9 Bureauಪ್ರಮುಖಬೆಂಗಳೂರು:ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಸೌಲಭ್ಯ ಮುಂದುವರಿಸುವ ಕುರಿತು ಚರ್ಚೆ ನಡೆಸುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಗಮನ ಸೆಳೆದಾಗ , ಈ ಸೌಲಭ್ಯ ನೀಡುವ ಕುರಿತು ಪರಿಶೀಲನೆ ನಡೆಸಬೇಕಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ ಅಂತಿಮ ಬಜೆಟ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್...Kannada News Portal