ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ವಿಜಯಕುಮಾರ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಬಿಜೆಪಿಗೆ ತಲೆ ನೋವಾಗಿದೆ.

ಜಯನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರು ಕಣಕ್ಕಿಳಿದಿದ್ದರು. ಜೆಡಿಎಸ್‌ನಿಂದ ಕಾಳೇಗೌಡ ಅವರು ಕಣಕ್ಕಿಳಿದಿದ್ದರು. ಕ್ಷೇತ್ರದ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಪಕ್ಷೇತರವಾಗಿ ಕಣಕ್ಕಿಳಿದಿದ್ದರು.

ಶಾಸಕ ವಿಜಯ ಕುಮಾರ್ ಅವರ ಸ್ಥಾನ ತುಂಬಬಲ್ಲ ಮುಂದಿನ ಅಭ್ಯರ್ಥಿ ಬಗ್ಗೆ ಚರ್ಚೆ ಶುರುವಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಹಲವಾರು ಮಂದಿ ರೇಸ್ ನಲ್ಲಿದ್ದಾರೆ ಕೂಡಾ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ, ಎಂಎಲ್ಸಿ ತಾರಾ ಹೆಸರು ಕೇಳಿ ಬಂದಿದೆ. ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಹೆಸರೂ ಕೂಡ ಕೇಳಿ ಬಂದಿತ್ತು.

ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಸಕ್ರಿಯವಾಗಿ ರಾಜಕೀಯದಲ್ಲಿರುವ ತಾರಾ ಅವರು ವಿಧಾನಪರಿಷತ್ ಸದಸ್ಯರಾಗಿ ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಗಮನ ಸೆಳೆದಿದ್ದಾರೆ.

ಮಿಕ್ಕಂತೆ ಮಾಜಿ ಮೇಯರ್ ಎಸ್.ಕೆ ನಟರಾಜು ಹೆಸರು ಮಿಕ್ಕವರಿಗಿಂತ ಮುಂದಿದೆ. ಅಲ್ಲದೆ, ಸಿ.ಕೆ ರಾಮಮೂರ್ತಿ, ಎಂ.ನಾಗರಾಜು, ಸೋಮಶೇಖರ್ ನಡುವೆ ತೀವ್ರ ಪೈಪೋಟಿ ನಡೆದಿದೆ.

Please follow and like us:
0
http://bp9news.com/wp-content/uploads/2018/05/DVS-Thara-Canvas_1.jpghttp://bp9news.com/wp-content/uploads/2018/05/DVS-Thara-Canvas_1-150x150.jpgPolitical Bureauಪ್ರಮುಖಬೆಂಗಳೂರುರಾಜಕೀಯActress Tara Khan as Jayanagar candidate !!!ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ವಿಜಯಕುಮಾರ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಬಿಜೆಪಿಗೆ ತಲೆ ನೋವಾಗಿದೆ. ಜಯನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರು ಕಣಕ್ಕಿಳಿದಿದ್ದರು. ಜೆಡಿಎಸ್‌ನಿಂದ ಕಾಳೇಗೌಡ ಅವರು ಕಣಕ್ಕಿಳಿದಿದ್ದರು. ಕ್ಷೇತ್ರದ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಪಕ್ಷೇತರವಾಗಿ ಕಣಕ್ಕಿಳಿದಿದ್ದರು. ಶಾಸಕ ವಿಜಯ ಕುಮಾರ್ ಅವರ ಸ್ಥಾನ ತುಂಬಬಲ್ಲ ಮುಂದಿನ ಅಭ್ಯರ್ಥಿ ಬಗ್ಗೆ...Kannada News Portal