ಬೆಂಗಳೂರು : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕದಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸಲಹೆ ಮಾಡಿದ್ದಾರೆ.

‘ಆಪ್ತ ಸಚಿವರು ಮತ್ತು ಶಾಸಕರ ಸಭೆ ನಡೆಸುವುದು ತಪ್ಪಲ್ಲ. ಆದರೆ, ಅಂತಹ ಸಭೆಗಳು ಭಿನ್ನಮತಿಯ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿವೆ ಎಂಬ ತಪ್ಪು ಭಾವನೆ ಮೂಡಿಸಬಾರದು’ ಎಂದು ರಾಹುಲ್‌ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಈ ಸಲಹೆ ಮಹತ್ವ ಪಡೆದಿದೆ.

ಸಿದ್ದರಾಮಯ್ಯ ಇತ್ತೀಚೆಗೆ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಬಂದಾಗ ರಾಹುಲ್‌ ಗಾಂಧಿ ಅವರು ಮೈತ್ರಿ ಧರ್ಮ ಪಾಲಿಸುವಂತೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಸುಗಮವಾಗಿ ಅಧಿಕಾರ ನಡೆಸಲು ಸಂಪೂರ್ಣ ಸಹಕಾರ ನೀಡುವಂತೆಯೂ ಅವರು ಸೂಚಿಸಿದ್ದಾರೆ ಎಂದೂ ಪಕ್ಷದ ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವರಿಷ್ಠರು ಅವರಿಗೆ ಬುದ್ದಿಮಾತು ಹೇಳಿದ್ದಾರೆ.

ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರು ಮತ್ತು ಶಾಸಕರ ಜತೆ ಪದೇ ಪದೇ ನಡೆಸುತ್ತಿರುವ ಔತಣಕೂಟ ಮತ್ತು ಸಭೆಗಳು ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಭಾವನೆ ಮೂಡಿಸಿವೆ. ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆ ನಡೆಯುತ್ತಿವೆ ಎಂಬ ತಪ್ಪು ಸಂದೇಶ ರವಾನಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ಗೆ ದೂರು ನೀಡಿದ್ದರು.
ಮಾತುಕತೆ ಮೂಲಕ ಪರಿಹಾರ: ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳಿ. ಮಾಧ್ಯಮಗಳ ಎದುರು ಚರ್ಚಿಸಬೇಡಿ ಎಂದು ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೂ ಇದೇ ಮಾತು ಹೇಳಲಾಗಿದೆ ಎಂದು ದೆಹಲಿಯಲ್ಲಿರುವ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ‘ಬಿಪಿ9 ನ್ಯೂಸ್ ’ಗೆ ತಿಳಿಸಿದ್ದಾರೆ.

Please follow and like us:
0
http://bp9news.com/wp-content/uploads/2018/08/karnataka-1523933717.jpeghttp://bp9news.com/wp-content/uploads/2018/08/karnataka-1523933717-150x150.jpegPolitical Bureauಪ್ರಮುಖರಾಜಕೀಯರಾಷ್ಟ್ರೀಯAlliance religion policy !!! Rahul to hear Siddharthಬೆಂಗಳೂರು : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕದಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸಲಹೆ ಮಾಡಿದ್ದಾರೆ. ‘ಆಪ್ತ ಸಚಿವರು ಮತ್ತು ಶಾಸಕರ ಸಭೆ ನಡೆಸುವುದು ತಪ್ಪಲ್ಲ. ಆದರೆ, ಅಂತಹ ಸಭೆಗಳು ಭಿನ್ನಮತಿಯ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿವೆ ಎಂಬ ತಪ್ಪು ಭಾವನೆ ಮೂಡಿಸಬಾರದು’ ಎಂದು ರಾಹುಲ್‌ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ...Kannada News Portal