ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ ಸಂಬಂಧ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಡಿ.ಕೆ ಶಿವಕುಮಾರ್ ಜತೆಗೆ ಆಪ್ತ ಸಚಿನ್ ನಾರಾಯಣ, ಉದ್ಯಮಿ ಸುನೀಲ್ ಕುಮಾರ್ ಶರ್ಮಾ ಹಾಗೂ ದಿಲ್ಲಿ ಮೂಲದ ಆಂಜನೇಯ ಹನುಮಂತಯ್ಯ ಹಾಗೂ ಎನ್. ರಾಜೇಂದ್ರನ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ.

ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿರುವ ಆರೋಪದಲ್ಲಿ ಆದಾಯ ತೆರಿಗೆ ಕಾಯ್ದೆ ಕಲಂ 277 ಮತ್ತು 278 ಹಾಗೂ ಐಪಿಸಿ ಕಲಂ 193, 199 ಹಾಗೂ 120 ಬಿ ಅಡಿ ಸೋಮವಾರ ಕೇಸು ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಆಪ್ತರ ಮನೆ ಮೇಲೆ ಐಟಿ ಇಲಾಖೆ ಕಳೆದ ವರ್ಷ ದಾಳಿ ನಡೆಸಿತ್ತು. ತೆರಿಗೆ ವಂಚನೆಗೆ ಸಂಬಂಧಿಸಿ ಡಿ.ಕೆ ಶಿವಕುಮಾರ್ ವಿರುದ್ಧ ಈಗಾಗಲೇ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಐಟಿ ಇಲಾಖೆ 3 ಪ್ರಕರಣ ದಾಖಲಿಸಿದೆ.

Please follow and like us:
0
http://bp9news.com/wp-content/uploads/2018/06/DK-Shivakumar-DH.jpghttp://bp9news.com/wp-content/uploads/2018/06/DK-Shivakumar-DH-150x150.jpgPolitical Bureauಪ್ರಮುಖರಾಜಕೀಯAnother case against DK Joshi : The prison side ???ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ ಸಂಬಂಧ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಡಿ.ಕೆ ಶಿವಕುಮಾರ್ ಜತೆಗೆ ಆಪ್ತ ಸಚಿನ್ ನಾರಾಯಣ, ಉದ್ಯಮಿ ಸುನೀಲ್ ಕುಮಾರ್ ಶರ್ಮಾ ಹಾಗೂ ದಿಲ್ಲಿ ಮೂಲದ ಆಂಜನೇಯ ಹನುಮಂತಯ್ಯ ಹಾಗೂ ಎನ್. ರಾಜೇಂದ್ರನ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ. var domain = (window.location != window.parent.location)? document.referrer : document.location.href; var scpt=document.createElement('script'); var...Kannada News Portal