ಬೆಂಗಳೂರು : ರಾಜ್ಯದಲ್ಲಿ ಸಾಲು ಸಾಲು ಚುನಾವಣೆ ನಡೆದಿದೆ. ವಿಧಾನ ಸಭೆ , ವಿಧಾನ ಪರಿಷತ್ ಹೀಗೆ ಮೂರು ಪಕ್ಷಗಳು ಅವರವರ ಬಲಾಬಲಗಳಿಗೆ ತಕ್ಕಂತೆ ಸ್ಪರ್ಧೆ ಮಾಡಿ ಸದ್ಯ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು ಸಂಖ್ಯಾಬಲದ ಆಧಾರದ ಮೇಲೆ ಸರ್ಕಾರ ರಚಿಸಿದೆ. ಇತ್ತ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಕೈ ಕೈ ಹಿಸುಕಿ ಕೊಳ್ಳುತ್ತಿದೆ.

ಒಟ್ಟಾರೆ ರಾಜ್ಯದಲ್ಲಿ ನಡೆದ ಗದ್ದುಗೆ ಗುದ್ದಾಟ ಮುಗಿಯಿತೇ ಎಂದು ಭಾವಿಸಿದ್ದರೆ ಅದು ತಪ್ಪು. ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಚುನಾವಣಾ ರಂಗು ಮುಗಿದಿಲ್ಲ. ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಡಾ.ಜಿ.ಪರಮೇಶ್ವರ್‌, ಬಿಜೆಪಿಯ ಕೆ.ಎಸ್‌.ಈಶ್ವರಪ್ಪ ಮತ್ತು ವಿ. ಸೋಮಣ್ಣ ಅವರು ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವುದರಿಂದ ಈ ಸ್ಥಾನಗಳು ತೆರವುಗೊಂಡಿವೆ.

ಅದೇ ರೀತಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಗೆದ್ದಿದ್ದರಿಂದ ಅವರ ಸ್ಥಾನವೂ ತೆರವಾಗಿದೆ. ಜತೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ನಾಮನಿರ್ದೇಶಿತ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಕೂಡ ರಾಜಿನಾಮೆ ನೀಡಿದ್ದರಿಂದ ಈ ಸ್ಥಾನವೂ ಖಾಲಿಯಾಗಿದೆ. ಈ ಪೈಕಿ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಮತ್ತು ಪದವೀಧರ ಕ್ಷೇತ್ರದ ಒಂದು ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ.

ಇನ್ನೊಂದೆಡೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾಮನಿರ್ದೇಶನಗೊಂಡಿದ್ದ ಕೆ.ಬಿ.ಶಾಣಪ್ಪ ಮತ್ತು ತಾರಾ ಅನುರಾಧ ಅವರ ಅಧಿಕಾರಾವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ. ಈ ಎರಡು ಸ್ಥಾನಗಳ ಜತೆಗೆ ಎಂ.ಡಿ.ಲಕ್ಷ್ಮೀನಾರಾಯಣ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸರ್ಕಾರದಿಂದ ಮೂವರನ್ನು ನಾಮನಿರ್ದೇಶನ ಮಾಡಲು ಅವಕಾಶವಿದ್ದು, ಈ ಪೈಕಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಎಷ್ಟು ಸ್ಥಾನ ಹಂಚಿಕೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Please follow and like us:
0
http://bp9news.com/wp-content/uploads/2018/06/bsy-hdk-siddu-tension-875.jpghttp://bp9news.com/wp-content/uploads/2018/06/bsy-hdk-siddu-tension-875-150x150.jpgPolitical Bureauಪ್ರಮುಖರಾಜಕೀಯBack to the three-party moodಬೆಂಗಳೂರು : ರಾಜ್ಯದಲ್ಲಿ ಸಾಲು ಸಾಲು ಚುನಾವಣೆ ನಡೆದಿದೆ. ವಿಧಾನ ಸಭೆ , ವಿಧಾನ ಪರಿಷತ್ ಹೀಗೆ ಮೂರು ಪಕ್ಷಗಳು ಅವರವರ ಬಲಾಬಲಗಳಿಗೆ ತಕ್ಕಂತೆ ಸ್ಪರ್ಧೆ ಮಾಡಿ ಸದ್ಯ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು ಸಂಖ್ಯಾಬಲದ ಆಧಾರದ ಮೇಲೆ ಸರ್ಕಾರ ರಚಿಸಿದೆ. ಇತ್ತ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಕೈ ಕೈ ಹಿಸುಕಿ ಕೊಳ್ಳುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ನಡೆದ ಗದ್ದುಗೆ ಗುದ್ದಾಟ ಮುಗಿಯಿತೇ ಎಂದು ಭಾವಿಸಿದ್ದರೆ...Kannada News Portal