ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಚಾರದಲ್ಲಿ ಪದೇ ಪದೇ ಬೇರೆ ನಾಯಕರ ಹಸ್ತಕ್ಷೇಪ ನಡೆಯುತ್ತಿರುವುದೇ ಸಮಸ್ಯೆಗೆ ಕಾರಣವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ಸಮಸ್ಯೆಯನ್ನು ಸರಿ ಮಾಡುತ್ತಾರೆ. ಸದ್ಯದ ವಾತಾವರಣದಲ್ಲಿ ಕಾಂಗ್ರೆಸ್ ಬಿಟ್ಟು ಯಾರು ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ನನಗೂ ಸದ್ಯದ ರಾಜಕೀಯ ಬಿಕ್ಕಟ್ಟಿಗೂ ಸಂಬಂಧವಿಲ್ಲ. ನಾನು ಕೂಡ ಅಸಮಾಧಾನ ಆಗಿಲ್ಲ. ಹೀಗಾಗಿ ನನಗೆ ಹೈಕಮಾಂಡ್ ವಾರ್ನಿಂಗ್ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಅಲ್ಲದೇ, ಕಾಂಗ್ರೆಸ್ನಲ್ಲಿ ಅಷ್ಟೇ ಅಲ್ಲ, ಎಲ್ಲಾ ಪಕ್ಷಗಳಲ್ಲಿಯೂ ಅಸಮಾಧಾನ ಇದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರನ್ನು 2 ಬಾರಿ ಭೇಟಿ ಮಾಡಿ ಮಾತನಾಡಿದ್ದೇನೆ.
ಅತೃಪ್ತರ ನೇತೃತ್ವ ಯಾರು ವಹಿಸಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅಲ್ಲದೇ ಸಚಿವ ಡಿ.ಕೆ. ಶಿವಕುಮಾರ್ ನನ್ನ ಭೇಟಿ ಮಾಡಿಲ್ಲ. ಜಿಲ್ಲಾ ರಾಜಕೀಯ ವಿಚಾರದಲ್ಲಿ ರಮೇಶ ಜಾರಕಿಹೊಳಿ ಜೊತೆಗೆ ಹಲವು ಬಾರಿ ಚರ್ಚೆ ಮಾಡಿದ್ದೇನೆ ಎಂದರು.

ಸೆಪ್ಟಂಬರ್ 16ರ ಬಗ್ಗೆ ರಾಜಕೀಯ ವಿಚಾರವಾಗಿ ನನಗೆ ಏನು ಗೊತ್ತಿಲ್ಲ. ಈ ತಿಂಗಳ ಕೊನೆಯಲ್ಲಿ ಮಂತ್ರಿ ಮಂಡಳ ವಿಸ್ತರಣೆ ನಡೆಯಲಿದೆ. ಬೆಂಬಲಿಗರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ವಿಶ್ವಾಸವಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ವಿಶ್ವಾಸಪಟ್ಟರು.

Please follow and like us:
0
http://bp9news.com/wp-content/uploads/2018/09/25be-vkp1-jarkiholi.jpghttp://bp9news.com/wp-content/uploads/2018/09/25be-vkp1-jarkiholi-150x150.jpgBP9 Bureauಪ್ರಮುಖಬೆಳಗಾವಿರಾಜಕೀಯಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಚಾರದಲ್ಲಿ ಪದೇ ಪದೇ ಬೇರೆ ನಾಯಕರ ಹಸ್ತಕ್ಷೇಪ ನಡೆಯುತ್ತಿರುವುದೇ ಸಮಸ್ಯೆಗೆ ಕಾರಣವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ಸಮಸ್ಯೆಯನ್ನು ಸರಿ ಮಾಡುತ್ತಾರೆ. ಸದ್ಯದ ವಾತಾವರಣದಲ್ಲಿ ಕಾಂಗ್ರೆಸ್ ಬಿಟ್ಟು ಯಾರು ಹೋಗಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500)...Kannada News Portal