ಚಿಕ್ಕೋಡಿ: ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಚಿಕ್ಕೋಡಿ ಮತ್ತು ಗೋಕಾಕ್​ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ. 1997ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅವರು ಚಿಕ್ಕೋಡಿ ಜಿಲ್ಲೆಯನ್ನು ಮಾಡಲು ಗೇಜಟ್​​​​​​ನಲ್ಲಿ ಘೋಷಣೆ ಮಾಡಿದ್ದರು. ಅಂದಿನ ಜಿಲ್ಲೆಯ ಕೆಲವು ರಾಜಕಾರಣಿಗಳು ಅದಕ್ಕೆ ಅಡ್ಡಗಾಲು ಹಾಕಿದ್ದರು. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆ ವಿಭಜನೆ ಮಾಡಿ ಇಲ್ಲಿ ರಾಜಕೀಯ ಪಾಳೇಗಾರಿಕೆಗೆ ಕಡಿವಾಣ ಹಾಕುವ ಕುರಿತು ಗಂಭೀರ ಚಿಂತನೆ ಮಾಡಿದ್ದಾರೆ ಎನ್ನಲಾಗುತ್ತಿದೆ.


ಜಿಲ್ಲೆಯನ್ನಾಗಿ ಮಾಡಿದರೆ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯವಾಗಲಿದೆ. ಜೊತೆಗೆ ಅಥಣಿ ಭಾಗದ ಜನರ ತೊಂದರೆ ನೀಗಿಸುವುದಕ್ಕಾಗಿ ಜಿಲ್ಲೆ ವಿಭಜನೆಗೆ ಹೆಚ್ಚಿನ ಉತ್ಸುಕತೆ ಹೊಂದಿದ್ದಾರೆ ಎನ್ನಲಾಗುತ್ತಿದೆ.ಈಗಾಗಲೇ ಚಿಕ್ಕೋಡಿ ಜಿಲ್ಲೆಯಾಗಲು ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿದ್ದು, ಕಳೆದ ಬಾರಿ ಸಿದ್ದರಾಮಯ್ಯನವರು ಜಿಲ್ಲೆಯನ್ನು ವಿಭಜನೆ ಮಾಡುವ ಭರವಸೆ ನೀಡಿದ್ದರು. ಈ ಬಾರಿಯಾದರು ಜಿಲ್ಲೆಯನ್ನಾಗಿ ಮಾಡುತ್ತಾರೆ ಎಂಬ ನೀರಿಕ್ಷೆ ಜನರಲ್ಲಿ ಹೆಚ್ಚಾಗಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾಗಲು ಎಲ್ಲಾ ಅರ್ಹತೆ ಹೊಂದಿದೆ. ಇಲ್ಲಿವರೆಗೆ ಆಡಳಿತ ನಡೆಸಿದ ಸರ್ಕಾರಗಳು ಜಿಲ್ಲಾ ಘೋಷಣೆ ಮಾಡದೆ ಭರವಸೆ ನೀಡುತ್ತಾ ಬಂದಿವೆ. ಆದರೆ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರಾದರೂ ಜಿಲ್ಲೆಯಾಗಿ ಘೋಷಣೆ  ಆಡಲಿ ಎನ್ನುವುದು ಸಾರ್ವಜನಿಕರ ಆಗ್ರಹ.

ವರದಿ: ಶಿವರಾಜ್ ಎಂ ನೇಸರಗಿ, ಚಿಕ್ಕೋಡಿ

Please follow and like us:
0
http://bp9news.com/wp-content/uploads/2018/09/kumaraswamy-story_650_031615064650.jpghttp://bp9news.com/wp-content/uploads/2018/09/kumaraswamy-story_650_031615064650-150x150.jpgBP9 Bureauಪ್ರಮುಖಬೆಳಗಾವಿರಾಜಕೀಯಚಿಕ್ಕೋಡಿ: ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಚಿಕ್ಕೋಡಿ ಮತ್ತು ಗೋಕಾಕ್​ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ. 1997ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅವರು ಚಿಕ್ಕೋಡಿ ಜಿಲ್ಲೆಯನ್ನು ಮಾಡಲು ಗೇಜಟ್​​​​​​ನಲ್ಲಿ ಘೋಷಣೆ ಮಾಡಿದ್ದರು. ಅಂದಿನ ಜಿಲ್ಲೆಯ ಕೆಲವು ರಾಜಕಾರಣಿಗಳು ಅದಕ್ಕೆ ಅಡ್ಡಗಾಲು ಹಾಕಿದ್ದರು. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆ ವಿಭಜನೆ ಮಾಡಿ ಇಲ್ಲಿ ರಾಜಕೀಯ ಪಾಳೇಗಾರಿಕೆಗೆ ಕಡಿವಾಣ ಹಾಕುವ ಕುರಿತು ಗಂಭೀರ ಚಿಂತನೆ ಮಾಡಿದ್ದಾರೆ...Kannada News Portal