ಮೂಡಲಗಿ: ವಡೇರಹಟ್ಟಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲು ಗ್ರಾಮದ ಹತ್ತಿರ ಹಳ್ಳಕ್ಕೆ ಬ್ರಿಡ್ಜ್-ಕಮ್-ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಎರಡು ತಿಂಗಳೊಳಗೆ ಈ ಕಾಮಗಾರಿ ಮುಗಿಯಲಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಣ್ಣ ನೀರಾವರಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದ ಬ್ರಿಡ್ಜ್-ಕಮ್-ಬ್ಯಾರೇಜ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಡೇರಹಟ್ಟಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಳೆದ ಒಂದುವರೆ ದಶಕದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಸರ್ಕಾರದ ಮಹತ್ವದ ಯೋಜನೆಗಳನ್ನು ಗ್ರಾಮಸ್ಥರಿಗೆ ಅರ್ಪಿಸಲಾಗಿದೆ. ಒಗ್ಗಟ್ಟಿನಿಂದ ಕೂಡಿರುವ ಇಲ್ಲಿನ ಕಾರ್ಯಕರ್ತರು ಇತರರಿಗೆ ಮಾದರಿಯಾಗಿದ್ದಾರೆ. ಒಗ್ಗಟ್ಟಿನ ಬಲದಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಗ್ರಾಮಸ್ಥರು ತೋರಿಸಿಕೊಟ್ಟಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮೇ ತಿಂಗಳಲ್ಲಿ ಜರುಗುವ ವಿಧಾನಸಭಾ ಚುನಾವಣೆಯಲ್ಲಿ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಸತತ 5ನೇ ಬಾರಿಗೆ ಮತ್ತೊಂದು ಅವಧಿಗೆ ಜನಸೇವೆ ಮಾಡಲು ಅವಕಾಶ ಒದಗಿಸಿಕೊಡುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು. ಜಿಪಂ ಮಾಜಿ ಸದಸ್ಯ ಮಾರುತಿ ತೋಳಮರಡಿ, ಗ್ರಾಪಂ ಅಧ್ಯಕ್ಷ ಸಿದ್ದಪ್ಪ ವಡೇರ, ವಕೀಲ ಎಂ.ಕೆ. ಕುಳ್ಳೂರ, ತಾಪಂ ಸದಸ್ಯ ಗೋಪಾಲ ಕುದರಿ, ಶಿದ್ಲಿಂಗ ಗಿಡೋಜಿ, ಪ್ರಭಾಶುಗರ ಮಾಜಿ ನಿರ್ದೇಶಕ ಅಡಿವೆಪ್ಪ ಹಾದಿಮನಿ, ಬನಪ್ಪ ವಡೇರ, ವಿಠ್ಠಲ ಗಿಡೋಜಿ, ಮಾರುತಿ ಸೊಡ್ರುಗೋಳ, ಚಂದ್ರು ಮೋಟೆಪ್ಪಗೋಳ, ಶಿವಪ್ಪ ಗಿಡೋಜಿ, ರುದ್ರಗೌಡ ಪಾಟೀಲ, ನಿವೃತ್ತ ಶಿಕ್ಷಕ ಎಸ್.ಎ. ವಡೇರ, ಸಿದ್ದಪ್ಪ ಪಡಚಿ, ಗೋಪಾಲ ತೋಳಮರಡಿ, ಅಧಿಕಾರಿಗಳು, ಗ್ರಾಪಂ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

Please follow and like us:
0
http://bp9news.com/wp-content/uploads/2018/03/WhatsApp-Image-2018-03-14-at-4.23.07-PM-1-1024x681.jpeghttp://bp9news.com/wp-content/uploads/2018/03/WhatsApp-Image-2018-03-14-at-4.23.07-PM-1-150x150.jpegBP9 Bureauಬೆಳಗಾವಿಮೂಡಲಗಿ: ವಡೇರಹಟ್ಟಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲು ಗ್ರಾಮದ ಹತ್ತಿರ ಹಳ್ಳಕ್ಕೆ ಬ್ರಿಡ್ಜ್-ಕಮ್-ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಎರಡು ತಿಂಗಳೊಳಗೆ ಈ ಕಾಮಗಾರಿ ಮುಗಿಯಲಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದ ಬ್ರಿಡ್ಜ್-ಕಮ್-ಬ್ಯಾರೇಜ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಡೇರಹಟ್ಟಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ...Kannada News Portal