ಬೆಳಗಾವಿ: ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಕುಂದಾನಗರಿ ಬೆಳಗಾವಿಯಲ್ಲಿ ಬೆಂಬಲಿಗರ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಿದೆ. ಎರಡನೇ ಪಟ್ಟಿಯಲ್ಲಾದರೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಇಂದು ಸಹ ಪ್ರತಿಭಟನೆ ನಡೆಸಿದರು.ಸತೀಶ್​​ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮಾನವ ಬಂದುತ್ವ ವೇದಿಕೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಬಟನೆ ನಡೆಸಿದರು.

ಬೆಳಗಾವಿಯ ಸುವರ್ಣ ಸೌಧ ಮುಂದೆ ಸೇರಿದ ಕಾರ್ಯಕರ್ತರು ಸುಮಾರು ಅರ್ಧ ಘಂಟೆಗಳವೆರೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.ಕೂಡಲೆ ಸತೀಶ ಜಾರಕಿಹೋಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲವಾದರೆ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸತೀಶ್ ಜಾರಕಿಹೊಳಿ ಪರ ಚಾಮರಾಜನಗರದಲ್ಲೂ ಪ್ರತಿಭಟನೆ

ಕಾಂಗ್ರೆಸ್ ನ ಸತೀಶ್ ಜಾರಕಿಹೋಳಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಸತೀಶ್ ಜಾರಕಿಹೋಳಿ ಅಭಿಮಾನಿ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಚಾಮರಾಜನಗರದಲ್ಲಿ ಪ್ರತಿಭಟ ನೆ ನಡೆಸಿದ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ209 ರ ರಸ್ತೆ ಸಂಚಾರ ತಡೆದು ಆಕ್ರೋಶ ಹೊರಹಾಕಿದರು. ಸತೀಶ್ ಜಾರಕಿಹೊಳಿ ಅವರನ್ನು  ಕಾಂಗ್ರೆಸ್ ಪಕ್ಷ ಕಡೆಗಣಿಸುತ್ತಿದೆ ಎಂದು ಆರೋಪಿದ, ಸಮ್ಮಿಶ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದದರು.

 

 

Please follow and like us:
0
http://bp9news.com/wp-content/uploads/2018/06/WhatsApp-Image-2018-06-13-at-4.37.48-PM-1024x576.jpeghttp://bp9news.com/wp-content/uploads/2018/06/WhatsApp-Image-2018-06-13-at-4.37.48-PM-150x150.jpegBP9 Bureauಪ್ರಮುಖಬೆಳಗಾವಿಬೆಳಗಾವಿ: ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಕುಂದಾನಗರಿ ಬೆಳಗಾವಿಯಲ್ಲಿ ಬೆಂಬಲಿಗರ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಿದೆ. ಎರಡನೇ ಪಟ್ಟಿಯಲ್ಲಾದರೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಇಂದು ಸಹ ಪ್ರತಿಭಟನೆ ನಡೆಸಿದರು.ಸತೀಶ್​​ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮಾನವ ಬಂದುತ್ವ ವೇದಿಕೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಬಟನೆ ನಡೆಸಿದರು. ಬೆಳಗಾವಿಯ ಸುವರ್ಣ ಸೌಧ ಮುಂದೆ ಸೇರಿದ ಕಾರ್ಯಕರ್ತರು ಸುಮಾರು ಅರ್ಧ ಘಂಟೆಗಳವೆರೆಗೆ...Kannada News Portal