ಬೆಳಗಾವಿ: ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿಯೇ ಸಿಎಂ ಕುಮಾರಸ್ವಾಮಿ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಇಂದು ಸುವರ್ಣಸೌಧದಲ್ಲಿ ಸಿಎಂ ಕುಮಾರಸ್ವಾಮಿ ಜನತಾ ದರ್ಶನ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೂಗುಚ್ಛ ನೀಡಿ ಬರ ಮಾಡಿಕೊಂಡರು.

ಆಗ ಸಿಎಂ ಕುಮಾರಸ್ವಾಮಿ ಸಚಿವ ರಮೇಶ್ ಜಾರಕಿಹೊಳಿಯವರ ಕೆನ್ನೆ ಹಿಡಿದು,ಸವರಿದ್ದಾರೆ. ಈ ವೇಳೆ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಹಾಜರಿದ್ದರು.
ಆದರೆ ಕುಮಾರಸ್ವಾಮಿ ಕೆನ್ನೆ ಸವರಿ ಮಾತನಾಡಿಸಿದರೂ, ರಮೇಶ್ ಜಾರಕಿಹೊಳಿ ಅವರು ಮಾತ್ರ ಸಿಎಂ ಅವರ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿಲ್ಲ.

ಕುಮಾರಸ್ವಾಮಿಯವರ ಜನತಾ ದರ್ಶನದಲ್ಲೂ ರಮೇಶ್ ಅವರ ದರ್ಶನ ಮಾತ್ರ ಆಗಲಿಲ್ಲ. ಮಾಹಿತಿ ಪ್ರಕಾರ, ಕುಮಾರಸ್ವಾಮಿಯವರನ್ನ ಬರ ಮಾಡಿಕೊಂಡ ನಂತರ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯನ್ನೇ ಬಿಟ್ಟಿದ್ದಾರೆ ಎನ್ನಲಾಗಿದೆ. ಸಿಎಂ ಮಾತುಕತೆಗೆ ಕರೆಯಬುದೆಂದು ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಸಚಿವ ರಮೇಶ್ ಜಾರಕಿಹೊಳಿಯವರ ಮುನಿಸು ಇನ್ನು ಮುಗಿಯಲಿಲ್ಲ ಎಂದು ಚರ್ಚೆಯಾಗುತ್ತಿದೆ.

Please follow and like us:
0
http://bp9news.com/wp-content/uploads/2018/09/WhatsApp-Image-2018-09-15-at-1.21.18-PM.jpeghttp://bp9news.com/wp-content/uploads/2018/09/WhatsApp-Image-2018-09-15-at-1.21.18-PM-150x150.jpegBP9 Bureauಪ್ರಮುಖಬೆಳಗಾವಿರಾಜಕೀಯಬೆಳಗಾವಿ: ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿಯೇ ಸಿಎಂ ಕುಮಾರಸ್ವಾಮಿ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಇಂದು ಸುವರ್ಣಸೌಧದಲ್ಲಿ ಸಿಎಂ ಕುಮಾರಸ್ವಾಮಿ ಜನತಾ ದರ್ಶನ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೂಗುಚ್ಛ ನೀಡಿ ಬರ ಮಾಡಿಕೊಂಡರು. var domain = (window.location != window.parent.location)? document.referrer : document.location.href; if(domain==''){domain...Kannada News Portal