ಬೆಳಗಾವಿ: ಸಿಎಂ ರೇಸ್​​ನಲ್ಲಿ ನಾನು ಇಲ್ಲ. ಅದು ನನಗೆ ಬೇಕಾಗಿಲ್ಲ. ಸತೀಶ್ ಜಾರಕಿಹೊಳಿ ಸಿಎಂ ರೇಸ್​​ನಲ್ಲಿದ್ದಾರೆ. ಅವರನ್ನ ಸಿಎಂ ಮಾಡೇ ಮಾಡುತ್ತೇವೆ. ಇದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಮುಂದಿಟ್ಟು ನಾವು ರಾಜಕಾರಣ ಮಾಡುತ್ತಿದ್ದೇವೆ. ನಮ್ಮ ಕುಟುಂಬದಲ್ಲಿ ಯಾವುದೇ ಒಡಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದೆ ಎನ್ನುವುದು ಮೂರ್ಖತನ. ನಾವು ಯಾವಾಗಲೂ ಒಂದೇ. ನಮಗೆ ನಮ್ಮದೇ ಇತಿಹಾಸವಿದೆ ಎಂದರು.

ಇನ್ನು ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆ ಇಲ್ಲ. ಮೊದಲಿನಿಂದಲೂ ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಬೇರೆಯವರ ಮಾತು ಕೇಳಿ ನಮ್ಮನ್ನ ನೋಯಿಸಬೇಡಿ ಎಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದರು.

Please follow and like us:
0
http://bp9news.com/wp-content/uploads/2018/09/collage-11.jpghttp://bp9news.com/wp-content/uploads/2018/09/collage-11-150x150.jpgBP9 Bureauಪ್ರಮುಖಬೆಳಗಾವಿರಾಜಕೀಯಬೆಳಗಾವಿ: ಸಿಎಂ ರೇಸ್​​ನಲ್ಲಿ ನಾನು ಇಲ್ಲ. ಅದು ನನಗೆ ಬೇಕಾಗಿಲ್ಲ. ಸತೀಶ್ ಜಾರಕಿಹೊಳಿ ಸಿಎಂ ರೇಸ್​​ನಲ್ಲಿದ್ದಾರೆ. ಅವರನ್ನ ಸಿಎಂ ಮಾಡೇ ಮಾಡುತ್ತೇವೆ. ಇದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಬೆಳಗಾವಿಯಲ್ಲಿ...Kannada News Portal