ಗೋಕಾಕ: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಹೊಸ ಜಿಲ್ಲೆ ರಚನೆ ಕುರಿತಂತೆ  ಮನವರಿಕೆ ಮಾಡಿಕೊಡಲು ನಿಯೋಜಿತ ಗೋಕಾಕ ಜಿಲ್ಲಾ ಹೋರಾಟ ಸಮಿತಿ ನಿಯೋಗವು ಮಾರ್ಚ್ 15 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ   ಅವರನ್ನು ಭೇಟಿ ಮಾಡಲಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಹೋರಾಟ ಸಮಿತಿ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲಿರುವ ನಿಯೋಗದಲ್ಲಿ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಸರ್ವಪಕ್ಷಗಳ ನಾಯಕರು ಪಾಲ್ಗೊಳ್ಲಲಿದ್ದಾರೆ.

ರಾಜ್ಯದಲ್ಲಿಯೇ ಅತಿ ದೊಡ್ಡ ಜಿಲ್ಲೆ   ಎನಿಸಿರುವ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿ ಹಾಗೂ ಗೋಕಾಕ ಪ್ರತ್ಯೇಕ ಜಿಲ್ಲೆಗಳ ರಚನೆಗೆ ಈಗಾಗಲೇ  ಸಿಎಂ ಸಿದ್ಧರಾಮಯ್ಯ ಸಹಮತ ವ್ಯಕ್ತಪಡಿಸಿ್ದ್ದು ಮಾರ್ಚ 15 ರೊಳಗೆ ಸರ್ವಪಕ್ಷ ಮುಖಂಡರೊಡನೆ ಚರ್ಚೆ ನಡೆಸುವುದಾಗಿ ಹೇಳಿದ್ದರು.

 

Please follow and like us:
0
http://bp9news.com/wp-content/uploads/2018/03/WhatsApp-Image-2018-03-14-at-4.42.18-PM-1024x768.jpeghttp://bp9news.com/wp-content/uploads/2018/03/WhatsApp-Image-2018-03-14-at-4.42.18-PM-150x150.jpegBP9 Bureauಬೆಳಗಾವಿಗೋಕಾಕ: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಹೊಸ ಜಿಲ್ಲೆ ರಚನೆ ಕುರಿತಂತೆ  ಮನವರಿಕೆ ಮಾಡಿಕೊಡಲು ನಿಯೋಜಿತ ಗೋಕಾಕ ಜಿಲ್ಲಾ ಹೋರಾಟ ಸಮಿತಿ ನಿಯೋಗವು ಮಾರ್ಚ್ 15 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ   ಅವರನ್ನು ಭೇಟಿ ಮಾಡಲಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಹೋರಾಟ ಸಮಿತಿ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲಿರುವ ನಿಯೋಗದಲ್ಲಿ...Kannada News Portal