ಅಥಣಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಅಂದಾಜು 2800 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಇದರಿಂದ ಕೃಷ್ಣೆಯ ಒಡಲು ತುಂಬಿ ಹರಿಯುತ್ತಿದೆ.

6 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಿಪ್ಪರಗಿ ಬ್ಯಾರೇಜ್ ಬೇಸಿಗೆಯಲ್ಲಿ ಸಂಪೂರ್ಣ ಬರಿದಾಗಿತ್ತು. ಅಥಣಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳು ಇದೇ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿದ್ದಾರೆ. ಆದರೆ ಬೇಸಿಗೆಯಲ್ಲಿ ನೀರು ಸರಬರಾಜು ಸ್ಥಗಿತ ಗೊಂಡು ಸಾರ್ವಜನಿಕರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈಗ ಮಳೆಗಾಲ ಪ್ರಾರಂಭವಾಗಿ ಕೃಷ್ಣಾ ಕಣಿವೆಯಲ್ಲಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಅಥಣಿ, ಜಮಖಂಡಿ, ರಬಕವಿ, ಬನಹಟ್ಟಿ, ಕುಡಚಿ ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ನೀರು ಬರುತ್ತಿದ್ದು ಜನರು ಸಂತಸಗೊಂಡಿದ್ದಾರೆ.

ಮಂಗಳವಾರದ ಹೊತ್ತಿಗೆ ಜಲಾಶಯದ ದೊಡ್ಡ ಸ್ಟೋರೇಜ್ ನಲ್ಲಿ ೦.೮ ಟಿಎಂಸಿ ನೀರು ತುಂಬಿ, ಒಂದು ಗೇಟ್ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಇನ್ನು ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಮಾಧ್ಯಮಗಳ ಮುಖಾಂತರ ನದಿತೀರ ರೈತರಿಗೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವರದಿ: ಶಿವರಾಜ್ ಎಂ ನೇಸರಗಿ, ಅಥಣಿ

Please follow and like us:
0
http://bp9news.com/wp-content/uploads/2018/06/Karnatakada-Miditha-50.jpeghttp://bp9news.com/wp-content/uploads/2018/06/Karnatakada-Miditha-50-150x150.jpegBP9 Bureauಪ್ರಮುಖಬೆಳಗಾವಿಅಥಣಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಅಂದಾಜು 2800 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಇದರಿಂದ ಕೃಷ್ಣೆಯ ಒಡಲು ತುಂಬಿ ಹರಿಯುತ್ತಿದೆ.  6 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಿಪ್ಪರಗಿ ಬ್ಯಾರೇಜ್ ಬೇಸಿಗೆಯಲ್ಲಿ ಸಂಪೂರ್ಣ ಬರಿದಾಗಿತ್ತು. ಅಥಣಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳು ಇದೇ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿದ್ದಾರೆ. ಆದರೆ ಬೇಸಿಗೆಯಲ್ಲಿ ನೀರು ಸರಬರಾಜು ಸ್ಥಗಿತ ಗೊಂಡು ಸಾರ್ವಜನಿಕರು...Kannada News Portal