ಬೆಳಗಾವಿ: ಲಕ್ಷ್ಮೀ‌ ಹೆಬ್ಬಾಳ್ಕರ್ ಹಾಗೂ ನನ್ನ ಸಮಸ್ಯೆ ಒಂದೇ ಆಗಿದೆ. ಅವರಿಗೂ ಸಚಿವ ಸ್ಥಾನ ತಪ್ಪಿದೆ, ನನಗೂ ಸಚಿವ ಸ್ಥಾನ ತಪ್ಪಿದೆ ಎಂದು ಶಾಸಕ ಸತೀಶ್​​ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಸ್ಥಾನ ತಪ್ಪಿಸಿದರು ಎನ್ನುವ ಮಾತೇ ಉದ್ಬವಿಸಲ್ಲ. ಸಚಿವ ಸ್ಥಾನ ತಪ್ಪಿದ್ದಕ್ಕೆ ಅವರು ಕಣ್ಣೀರು ಹಾಕಿದರು. ನಾನು ಹಾಕಲಿಲ್ಲ ಅಷ್ಟೇ ಎಂದರು. ನಾವಿಬ್ಬರೂ ಸೇರಿಕೊಂಡು ನಮಗೆ ಸಚಿವ ಸ್ಥಾನ ತಪ್ಪಿಸಿದವರು ಯಾರು ಅಂತಾ ಹುಡುಕಬೇಕಿದೆ ಎಂದರು.

ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಕಾರ್ಯಕರ್ತರ ಒತ್ತಾಯಕ್ಕೆ‌ ಮಣಿದು ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಮುಂದೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಈ ಕುರಿತು ಬೆಂಗಳೂರಲ್ಲಿ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸಮ್ಮುಖದಲ್ಲಿ ಸಭೆ ನಡೆಯಲಿದೆ.

ಇದರಲ್ಲಿ ನಾನು ಭಾಗವಹಿಸುತ್ತೇನೆ. ನಮ್ಮ ಬೇಡಿಕೆಯನ್ನ ಕೇಳುತ್ತೇವೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಶೀಘ್ರದಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ರಾಜೀನಾಮೆ ನೀಡಿರುವ ಕುರಿತು ಕೆಲ ನಾಯಕರು ನನ್ನ ಜೊತೆ ಮಾತನಾಡಿದ್ದಾರೆ.ಆದರೆ ರಾಜೀನಾಮೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದರು.

 

Please follow and like us:
0
http://bp9news.com/wp-content/uploads/2018/06/collage-3-9.jpghttp://bp9news.com/wp-content/uploads/2018/06/collage-3-9-150x150.jpgBP9 Bureauಪ್ರಮುಖಬೆಳಗಾವಿರಾಜಕೀಯ  ಬೆಳಗಾವಿ: ಲಕ್ಷ್ಮೀ‌ ಹೆಬ್ಬಾಳ್ಕರ್ ಹಾಗೂ ನನ್ನ ಸಮಸ್ಯೆ ಒಂದೇ ಆಗಿದೆ. ಅವರಿಗೂ ಸಚಿವ ಸ್ಥಾನ ತಪ್ಪಿದೆ, ನನಗೂ ಸಚಿವ ಸ್ಥಾನ ತಪ್ಪಿದೆ ಎಂದು ಶಾಸಕ ಸತೀಶ್​​ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಸ್ಥಾನ ತಪ್ಪಿಸಿದರು ಎನ್ನುವ ಮಾತೇ ಉದ್ಬವಿಸಲ್ಲ. ಸಚಿವ ಸ್ಥಾನ ತಪ್ಪಿದ್ದಕ್ಕೆ ಅವರು ಕಣ್ಣೀರು ಹಾಕಿದರು. ನಾನು ಹಾಕಲಿಲ್ಲ ಅಷ್ಟೇ ಎಂದರು. ನಾವಿಬ್ಬರೂ ಸೇರಿಕೊಂಡು ನಮಗೆ ಸಚಿವ ಸ್ಥಾನ ತಪ್ಪಿಸಿದವರು ಯಾರು ಅಂತಾ ಹುಡುಕಬೇಕಿದೆ...Kannada News Portal