ಬೆಂಗಳೂರು : ಮಡಿಕೇರಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮತಯಾಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪರಸ್ಪರ ಹೊಡೆದಾಡಿಕೊಂಡಿದ್ದು, ಗೋಣಿಕೊಪ್ಪಲುವಿನಲ್ಲಿ ಈ ಘಟನೆ ನಡೆದಿದೆ.

ಏಕಕಾಲದಲ್ಲಿ ಉಭಯ ಪಕ್ಷದ ಕಾರ್ಯಕರ್ತರು ಕೋಣಿಕೊಪ್ಪಲುವಿನ 2ನೇ ಬ್ಲಾಕ್‌ನಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಪಕ್ಷದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಘರ್ಷಣೆ ವೇಳೆ ಅಕ್ಕಪಕ್ಕದ ಮನೆಯ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಪೋಲಿಸರು 12 ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘರ್ಷಣೆಯಲ್ಲಿ ಸೋಮಣ್ಣ, ಮುರುಗ, ಅಯ್ಯಪ್ಪ ಎಂಬುವವರು ಸೇರಿ ಹಲವರು ಗಾಯಗೊಂಡಿದ್ದು, ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಘು ಲಾಠಿ ಪ್ರಹಾರ ನಡೆಯುವ ಮೂಲಕ ಪರಿಸ್ಥಿತಿಯನ್ನು ಹತೋಟೆಗೆ ತರಲು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ವೇಳೆ ಪೇದೆ ಗಣೇಶ್ ಎಂಬುವವರ ತಲೆಗೆ ಗಂಭೀರ ಗಾಯವಾಗಿದೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರ್ ಮಹದೇವಸ್ವಾಮಿ, ಡಿವೈಎಸ್‌ಪಿ ನಾಗಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಹರಿಶ್ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ದಾಖಲು ಮಾಡಲಾಗಿತ್ತು. ಇದೀಗ ಬಂದಿರುವ ವರದಿಗಳ ಪ್ರಕಾರ ನಿನ್ನೆ ನಡೆದಿದ್ದ ಕಾರ್ಯಕರ್ತರ ಮಾರಾಮಾರಿ ಆಸ್ಪತ್ರೆಯಲ್ಲಿಯೂ ಮುಂದುವರೆದಿದ್ದು, ಆಸ್ಪತ್ರೆಯ ಉಪಕರಣಗಳು ಜಖಂ ಗೊಂಡಿದೆ.

Please follow and like us:
0
http://bp9news.com/wp-content/uploads/2018/05/Kasaragod_2-1.jpghttp://bp9news.com/wp-content/uploads/2018/05/Kasaragod_2-1-150x150.jpgPolitical Bureauಕೊಡಗುಪ್ರಮುಖರಾಜಕೀಯBJP flays Congress workers in Cauvery river : Madikeri tense !!!  ಬೆಂಗಳೂರು : ಮಡಿಕೇರಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮತಯಾಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪರಸ್ಪರ ಹೊಡೆದಾಡಿಕೊಂಡಿದ್ದು, ಗೋಣಿಕೊಪ್ಪಲುವಿನಲ್ಲಿ ಈ ಘಟನೆ ನಡೆದಿದೆ. ಏಕಕಾಲದಲ್ಲಿ ಉಭಯ ಪಕ್ಷದ ಕಾರ್ಯಕರ್ತರು ಕೋಣಿಕೊಪ್ಪಲುವಿನ 2ನೇ ಬ್ಲಾಕ್‌ನಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಪಕ್ಷದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಘರ್ಷಣೆ ವೇಳೆ ಅಕ್ಕಪಕ್ಕದ ಮನೆಯ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ...Kannada News Portal