ಬಾಗಲಕೋಟೆ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಾರದಿರುವುದು ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕರಾದ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಆಯೋಜಿಸಿದ್ದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ನನ್ನ 5ವವರ್ಷಗಳ ಆಡಳಿತ ಅವಧಿಯಲ್ಲಿ ಎಲ್ಲ ಜಾತಿ ಸಮುದಾಯಗಳ ಅಭಿವೃದ್ಧಿ, ಹಲವಾರು ಯೋಜನೆಗಳನ್ನು ನೀಡಿದೆ. ಜನರು ನೆಮ್ಮದಿಯ ಜೀವನ ಸಾಗಿಸಲು ಅನ್ನ ಭಾಗ್ಯ, ಕ್ಷೀರ ಭಾಗ್ಯ, ಆರೋಗ್ಯ ಭಾಗ್ಯ, ಸೇರಿ ಅನೇಕ ಯೋಜನೆಗಳನ್ನು  ಜಾರಿಗೆ ತಂದು ಸರ್ವರ ಅಭಿವೃದ್ಧಿಗೆ ಶ್ರಮಿಸಿದೆ ಆದರೂ ಜನರು ಕಾಂಗ್ರೆಸ್​​ಗೆ ಅಧಿಕಾರ ನೀಡದಿರುವುದು ನೋವು ತಂದಿದೆ ಎಂದರು.

ಇನ್ನೂ ಈ ಭಾರಿಯ ಚುನಾವಣೆಯಲ್ಲಿ ಯಾವ ಪಕ್ಷಕೂ ಸ್ಪಷ್ಟ ಬಹುಮತ ಬಾರದೆ ಹೋಗಿದ್ದಕ್ಕೆ ಅನಿವಾರ್ಯವಾಗಿ ಸಮ್ಮಿಶ್ರ ಸರಕಾರ ರಚಿನೆ ಆಗಿದೆ ಎಂದರು. ಕಾಂಗ್ರೆಸ್- ಜೆಡಿಎಸ್ ಪಕ್ಷಗಳು ಚುನಾವಣೆ ವೇಳೆ ನೀಡಿದ ಪ್ರಣಾಳಿಕೆಯನ್ನು ಉಭಯ ಪಕ್ಷಗಳು ಸಮಿತಿ ಸಭೆಯಲ್ಲಿ ಚರ್ಚಿಸಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಶಾಸಕ ಸಿ ಎಸ್ ನಾಡಗೌಡರ,  ಮಾಜಿ ಸಚಿವರಾದ ಎಸ್ ಆರ್ ಪಾಟೀಲ, ಆರ್ ಬಿ ತಿಮ್ಮಾಪುರ, ಮಾಜಿ ಶಾಸಕರಾದ ಬಿ ಬಿ ಚಿಮ್ಮನಕಟ್ಟಿ, ಎಚ್. ವೈ ಮೇಟಿ, ಎನ್ ಬಿ ಬನ್ನೂರ, ಡಾಕ್ಟರ್ ಮಲ್ಲು ಕಿತ್ತಲಿ, ಉಸಮಾನ ಅತ್ತಾರ ಮತ್ತಿತರರು ಉಪಸ್ಥಿತರಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-11-at-2.03.54-PM-1024x768.jpeghttp://bp9news.com/wp-content/uploads/2018/06/WhatsApp-Image-2018-06-11-at-2.03.54-PM-150x150.jpegBP9 Bureauಪ್ರಮುಖಬಾಗಲಕೋಟೆರಾಜಕೀಯಬಾಗಲಕೋಟೆ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಾರದಿರುವುದು ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕರಾದ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಆಯೋಜಿಸಿದ್ದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ನನ್ನ 5ವವರ್ಷಗಳ ಆಡಳಿತ ಅವಧಿಯಲ್ಲಿ ಎಲ್ಲ ಜಾತಿ ಸಮುದಾಯಗಳ ಅಭಿವೃದ್ಧಿ, ಹಲವಾರು ಯೋಜನೆಗಳನ್ನು ನೀಡಿದೆ. ಜನರು ನೆಮ್ಮದಿಯ ಜೀವನ ಸಾಗಿಸಲು ಅನ್ನ ಭಾಗ್ಯ, ಕ್ಷೀರ ಭಾಗ್ಯ,...Kannada News Portal