ಬಳ್ಳಾರಿ : ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶೀಘ್ರವೇ ಪತ್ರ ಬರೆಯಲಾಗುವುದು ಎಂದು ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು.


ಮಹರ್ಷಿ ವಾಲ್ಮೀಕಿ ವೃತ್ತದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕಿನ ಮೇಲೆ ಪರಿಣಾಮ ಬೀರುತ್ತಿರುವುದು ಸತ್ಯವಾಗಿದೆ. ಈ ಕುರಿತಂತೆ ಸಮಗ್ರವಾದ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಂಡು ತೈಲ ಬೆಲೆಯನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದು ಜನಸಾಮಾನ್ಯರಿಗೆ ಸುಲಭದ ದರದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಜನರಿಗೆ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿಗೆ ಒತ್ತಾಯಿಸಲಾಗುತ್ತದೆ.

ಸ್ವತಂತ್ರ ಭಾರತದ 67 ವರ್ಷಗಳ ಆಡಳಿತದಲ್ಲಿ 57 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ತೈಲ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಪ್ರಸ್ತುತ ಸಂದರ್ಭದಲ್ಲೂ ಸಹ ಭಾರತ ತನ್ನ ಬೇಡಿಕೆಯ ಶೇ 82 ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದು ದೇಶದ ಭವಿಷ್ಯದ ಕುರಿತು ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿಯ ಕಾಳಜಿ ಇಲ್ಲದಿರುವುದೇ ಕಾರಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಎಂ.ಗೋನಾಳ್ ಮುರಾರಿಗೌಡ, ಎರಂಗಳಿ ತಿಮ್ಮಾರೆಡ್ಡಿ, ಬಿ.ಶಿವಕುಮಾರ್, ಕೆ.ಶಶಿಕಲಾ, ಕೆಎ ರಾಮಲಿಂಗಪ್ಪ, ಸುಗುಣ, ಶ್ರೀನಿವಾಸ್ ಮೋತ್ಕರ್, ವೀರಶೇಖರರೆಡ್ಡಿ, ಎಸ್.ಮಲ್ಲನಗೌಡ, ಸಂದೀಪ್, ಶ್ರೀನಿವಾಸ್ ಪಾಟೀಲ್ ಇನ್ನಿತರರು ಇದ್ದರು.

Please follow and like us:
0
http://bp9news.com/wp-content/uploads/2018/09/-ಪತ್ರ-ಬರೆಯಲಿರುವ-ಬಿಜೆಪಿ-ಶಾಸ-BP9NEWS2-e1536570412902.jpeghttp://bp9news.com/wp-content/uploads/2018/09/-ಪತ್ರ-ಬರೆಯಲಿರುವ-ಬಿಜೆಪಿ-ಶಾಸ-BP9NEWS2-e1536570412902-150x150.jpegBP9 Bureauಪ್ರಮುಖಬಳ್ಳಾರಿರಾಜಕೀಯಬಳ್ಳಾರಿ : ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶೀಘ್ರವೇ ಪತ್ರ ಬರೆಯಲಾಗುವುದು ಎಂದು ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಮಹರ್ಷಿ...Kannada News Portal