ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಚುನಾವಣೆಗೆ  ಕ್ಷಣಗಣನೆ ಆರಂಭವಾಗಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಂತಿಮ ಕ್ಷಣದ ಪ್ಲಾನ್​​​ನಲ್ಲಿ ತೊಡಗಿದ್ದಾರೆ. ಕುತೂಹಲ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಶಾಖಾ ಮಠಕ್ಕೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಮಿತ್ ಷಾ ಒಬ್ಬರೇ ತೆರಳಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ರಾಜ್ಯದ ಯಾವುದೇ ನಾಯಕರನ್ನು ತಮ್ಮೊಂದಿಗೆ ಕರೆದೊಯ್ದಿರಲಿಲ್ಲ.

ನಂತರ ಶ್ರೀಗಳು ಹಾಗೂ ಅಮಿತ್ ಷಾ ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಶ್ರೀಗಳ ಜತೆ ಏನು ಮಾತುಕತೆ ನಡೆಸಿದರು ಎಂಬುದು ಕುತೂಹಲಕಾರಿಯಾಗಿದೆ.

ಈ ಬಗ್ಗೆ ಅಮಿತ್ ಟ್ವೀಟ್ ಮಾಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಾದ ದೊರೆಕಿದ್ದು ನನ್ನ ಪುಣ್ಯ. ಅನ್ನ ದಾಸೋಹಿ, ಶಿಕ್ಷಣ ಸಂತ, ನಾಥ ಪರಂಪರೆಯ 72ನೇ ಪೀಠಾಧ್ಯಕ್ಷರ ದಿವ್ಯ ಮಾರ್ಗದರ್ಶನ ನಮಗಿದೆ. ಎಂದು ಕನ್ನಡದಲ್ಲಿಯೇ  ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆಗೆ ಅಂತಿಮ ಹಂತದಲ್ಲಿರು ಕ್ಷಣದಲ್ಲಿ ಅಮಿತ್​​ ಷಾ  ಮತ್ತು ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಏನಾದರೂ ಆಗಲಿ ರಾಜ್ಯದಲ್ಲಿ ಅಧಿಕಾರ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಅಮಿತ್​​​ ಷಾ ಕೊನೆಯಗಳಿಗೆಯಲ್ಲಿ ಒಕ್ಕಲಿಗ ಸಮುದಾಯದ  ಸ್ವಾಮಿಜೀಯವರನ್ನ ಭೇಟಿಯಾಗಿ ಮಾತುಕತೆ ನಡೆಸುವ ಮೂಲಕ ಯಾವ ರೀತಿ ಗೇಮ್​​ ಪ್ಲಾನ್​​ ಮಾಡಿದ್ದಾರೆ ಎಂದು ಕಾದು ನೋಡಬೇಕಿದೆ.

 

 

 

 

 

 

 

 

Please follow and like us:
0
http://bp9news.com/wp-content/uploads/2018/05/WhatsApp-Image-2018-05-10-at-3.39.54-PM.jpeghttp://bp9news.com/wp-content/uploads/2018/05/WhatsApp-Image-2018-05-10-at-3.39.54-PM-150x150.jpegBP9 Bureauಪ್ರಮುಖಬೆಂಗಳೂರುರಾಜಕೀಯಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆಗೆ  ಕ್ಷಣಗಣನೆ ಆರಂಭವಾಗಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಂತಿಮ ಕ್ಷಣದ ಪ್ಲಾನ್​​​ನಲ್ಲಿ ತೊಡಗಿದ್ದಾರೆ. ಕುತೂಹಲ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಶಾಖಾ ಮಠಕ್ಕೆ ಇಂದು ಬೆಳಗ್ಗೆ 10...Kannada News Portal