ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ‘ಸ್ವಚ್ಛತೆಯೇ ಸೇವೆ’ (ಸ್ವಚ್ಛತಾ ಹೀ ಸೇವಾ) ಆಂದೋಲನಕ್ಕೆ ಚಾಲನೆ ನೀಡಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ್ ಅಭಿಯಾನ ಅಕ್ಟೋಬರ್ 2ರಂದು 4 ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಭಾರತ್ ರಾಯಭಾರಿಗಳೊಂದಿಗೆ ಮೋದಿ ಸಂವಾದ ನಡೆಸಿರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಸಂವಾದ ನಡೆಸಿದರು.

ಕಳೆದ 4 ವರ್ಷಗಳಲ್ಲಿ ದೇಶಾದ್ಯಂತ 9 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಶೇ.90ರಷ್ಟು ಭಾರತೀಯರು ಶೌಚಾಲಯವನ್ನು ಬಳಸಲು ಆರಂಭಿಸಿದ್ದಾರೆ. 450ಕ್ಕೂ ಹೆಚ್ಚು ಜಿಲ್ಲೆಗಳು ಬಯಲು ಶೌಚ ಮುಕ್ತವಾಗಿವೆ. 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೂ ಕೂಡ ಬಯಲು ಶೌಚ ಮುಕ್ತವಾಗಿವೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಸೆಲ್ಯೂಟ್ ಎಂದು ಹೇಳಿದ ಮೋದಿ, ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ಭಾಗಿಯಾಗುವಂತೆ ಕರೆ ನೀಡಿದ್ದಾರೆ. ಅಕ್ಟೋಬರ್ 2ರವರೆಗೆ ಈ ಅಭಿಯಾನ ನಡೆಯಲಿದೆ.

ಅಭಿಯಾನದಲ್ಲಿ ಭಾಗಿಯಾಗುವಂತೆ ಮೋದಿ ಈಗಾಗಲೇ ವಿವಿಧ ಕ್ಷೇತ್ರಗಳ 2000 ಜನರನ್ನು ಆಹ್ವಾನಿಸಿದ್ದಾರೆ. ನಿವೃತ್ತ ನ್ಯಾಯಾಧೀಶರು, ನಿವೃತ್ತ ಸರ್ಕಾರಿ ಅಧಿಕಾರಿಗಳು, ಏಷ್ಯನ್ ಗೇಮ್ಸ್ ಪದಕ ವಿಜೇತರು, ಶೌರ್ಯ ಪ್ರಶಸ್ತಿ ವಿಜೇತರು, ಸಿಎಂಗಳು, ಡಿಸಿಎಂಗಳು, ರಾಜ್ಯಪಾಲರು, ಪತ್ರಕರ್ತರು, ಲೆಫ್ಟಿನೆಂಟ್ ಗವರ್ನರ್ಗಳು, ಕ್ರೀಡಾಪಟುಗಳು, ಚಿತ್ರರಂಗದವರು ಹಾಗು ಧಾರ್ಮಿಕ ಗುರುಗಳಿಗೆ ಮೋದಿ ಆಹ್ವಾನ ನೀಡಿದ್ದಾರೆ.

ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ, ಕ್ರೀಡಾಪಟು ಪಿಟಿ ಉಷಾ, ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಹಾಗೂ ಮುಂತಾದವರು ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ಮೋದಿ ದೆಹಲಿಯ ಪಹಾಡ್ಗಂಜ್ನ್ಲಲಿನ ಶಾಲೆಯೊಂದಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯ ನಡೆಸಿದರು.

Please follow and like us:
0
http://bp9news.com/wp-content/uploads/2018/09/41846285_10160918363090165_5122122630786187264_n.jpghttp://bp9news.com/wp-content/uploads/2018/09/41846285_10160918363090165_5122122630786187264_n-150x150.jpgBP9 Bureauಪ್ರಮುಖರಾಜಕೀಯರಾಷ್ಟ್ರೀಯನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ‘ಸ್ವಚ್ಛತೆಯೇ ಸೇವೆ’ (ಸ್ವಚ್ಛತಾ ಹೀ ಸೇವಾ) ಆಂದೋಲನಕ್ಕೆ ಚಾಲನೆ ನೀಡಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ್ ಅಭಿಯಾನ ಅಕ್ಟೋಬರ್ 2ರಂದು 4 ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಭಾರತ್ ರಾಯಭಾರಿಗಳೊಂದಿಗೆ ಮೋದಿ ಸಂವಾದ ನಡೆಸಿರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಸಂವಾದ ನಡೆಸಿದರು. var domain...Kannada News Portal