ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮತ್ತು ಈಗಿನ ಬಿಜೆಪಿ ಸರ್ಕಾರಗಳೇ ನೇರ ಹೊಣೆ ಎಂದು ಬಿಎಸ್ಪಿಯ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ. ದೇಶಾದ್ಯಂತ ತೈಲ ದರ ಏರಿಕೆ ಖಂಡಿಸಿ, ಕಾಂಗ್ರೆಸ್ ಸೆ.10ರಂದು ನಡೆದ ಭಾರತ್ ಬಂದ್ಗೆ ಬಿಎಸ್ಪಿ ಬೆಂಬಲ ನೀಡಿರಲಿಲ್ಲ. ಇದೀಗ ಮಾಯಾವತಿಯ ಈ ಹೇಳಿಕೆ ಕಾಂಗ್ರೆಸ್ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಅತ್ತ, 2019ರ ಲೋಕಸಭಾ ಚುನಾವಣೆ ಹಿನ್ನೆಲೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಮುಂಚೂಣಿಯಲ್ಲಿದ್ದ ಮಾಯಾವತಿ, ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ. 2019ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳು ಮಾಡಿಕೊಂಡ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟಗೊಂಡಂತಿದೆ. ತೃತೀಯ ರಂಗದ ಪಕ್ಷಗಳ ಒಗ್ಗಟ್ಟಿನ ಮಂತ್ರದಲ್ಲಿ ಶಕ್ತಿ ಇಲ್ಲ ಎಂದು ಈಗಾಗಲೇ ಬಿಜೆಪಿ ಹೇಳುತ್ತಾ ಬರುತ್ತಿದ್ದು, ಮಾಯಾವತಿ ಸಿಟ್ಟು ಇದಕ್ಕೆ ಪುಷ್ಟಿ ನೀಡುವಂತಿದೆ.

ಮುಂದಿನ ಲೋಕಸಭಾ ಚುನಾವಣೆಗೆ ತೃತೀಯ ರಂಗದ ಪಕ್ಷಗಳಲ್ಲಿ ಒಗ್ಗಟ್ಟಿದೆ ಎಂದು ತೋರುವುದು ಬಿಟ್ಟು, ಮಾಯಾವತಿ ಹೀಗೆ ಹೇಳಿರುವುದು ಸಾಮಾನ್ಯ ಜನರಿಗೆ ತಪ್ಪು ಸಂದೇಶ ರವಾನೆ ಯಾಗುತ್ತೆ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲೂ ಮಾಯಾವತಿ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. 2019ರ ಲೋಕಸಭಾ ಚುನಾವಣೆಗೂ ಮುನ್ನವೇ ಮಹಾಘಟಬಂಧನ್ಗೆ ಸಜ್ಜಾಗಿರುವ ಪಕ್ಷಗಳಲ್ಲಿ ಒಡಕು ಮೂಡುತ್ತಿರೋದು, ಕಾಂಗ್ರೆಸ್ಗೆ ಭಾರೀ ಹಿನ್ನಡೆ ಉಂಟು ಮಾಡುವ ಸಾಧ್ಯತೆಯಿದೆ.

Please follow and like us:
0
http://bp9news.com/wp-content/uploads/2018/09/file709lf7urguohy4dvm7.jpghttp://bp9news.com/wp-content/uploads/2018/09/file709lf7urguohy4dvm7-150x150.jpgBP9 Bureauಪ್ರಮುಖರಾಜಕೀಯರಾಷ್ಟ್ರೀಯನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮತ್ತು ಈಗಿನ ಬಿಜೆಪಿ ಸರ್ಕಾರಗಳೇ ನೇರ ಹೊಣೆ ಎಂದು ಬಿಎಸ್ಪಿಯ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ. ದೇಶಾದ್ಯಂತ ತೈಲ ದರ ಏರಿಕೆ ಖಂಡಿಸಿ, ಕಾಂಗ್ರೆಸ್ ಸೆ.10ರಂದು ನಡೆದ ಭಾರತ್ ಬಂದ್ಗೆ ಬಿಎಸ್ಪಿ ಬೆಂಬಲ ನೀಡಿರಲಿಲ್ಲ. ಇದೀಗ ಮಾಯಾವತಿಯ ಈ ಹೇಳಿಕೆ ಕಾಂಗ್ರೆಸ್ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. var domain = (window.location != window.parent.location)? document.referrer : document.location.href; if(domain==''){domain...Kannada News Portal