ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಮುಗಿದ ಬೆನ್ನಲ್ಲೇ ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದ್ದು, ಜೂನ್ 8ರಂದು ಮತದಾನ ನಡೆಯಲಿದೆ .

ಮೇ 22ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 25ರೊಳಗೆ ವಾಪಸ್ ಪಡೆಯಬಹುದು. ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ. ಜೂನ್ 15ರೊಳಗೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರ, ದಕ್ಷಿಣ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಪದವೀಧರ ಮತಕ್ಷೇತ್ರ, ಬೆಂಗಳೂರು ಪದವೀಧರ ಮತಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮೇ 15ರಂದು ಅಧಿಸೂಚನೆ ಹೊರಬೀಳಲಿದೆ.

ಜೂನ್21 ಕ್ಕೆ ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆಯಾಗಿರುವ ರಮೇಶ್​ಬಾಬು, ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮರಿತಿಬ್ಬೇಗೌಡ, ನೈಋತ್ಯ ಶಿಕ್ಷಕರ ಮತಕ್ಷೇತ್ರದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನೈಋತ್ಯ ಪದವೀಧರ ಮತಕ್ಷೇತ್ರದ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಪದವೀಧರ ಮತಕ್ಷೇತ್ರದ ರಾಮಚಂದ್ರಗೌಡ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರದ ಅಮರನಾಥ್ ಪಾಟೀಲ್ ಅವರ ಅವಧಿ ಕೊನೆಗೊಳ್ಳಲಿದ್ದು ಈ 6 ಸ್ಥಾನಗಳಿಗೆ ಜೂನ್ 8ರಂದು ಚುನಾವಣೆ ನಡೆಯಲಿದೆ.

 

Please follow and like us:
0
http://bp9news.com/wp-content/uploads/2018/05/karnataka-1.jpghttp://bp9news.com/wp-content/uploads/2018/05/karnataka-1-150x150.jpgBP9 Bureauಪ್ರಮುಖಬೆಂಗಳೂರುರಾಜಕೀಯಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಮುಗಿದ ಬೆನ್ನಲ್ಲೇ ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದ್ದು, ಜೂನ್ 8ರಂದು ಮತದಾನ ನಡೆಯಲಿದೆ . ಮೇ 22ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 25ರೊಳಗೆ ವಾಪಸ್ ಪಡೆಯಬಹುದು. ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ....Kannada News Portal