ಬೆಂಗಳೂರು : 224 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಮೇ 12ರಂದು ಚುನಾವಣೆ ನಡೆಯಲಿರುವುದರಿಂದ ಇಂದು ಸಂಜೆ 5 ಗಂಟೆಯಿಂದ ಎಲ್ಲಕಡೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ .

ಇಂದು ಸಂಜೆ 5 ರಿಂದ ಮೇ 12ರ ಮಧ್ಯರಾತ್ರಿವರೆಗೂ ಮದ್ಯ ಮಾರಾಟ ಹಾಗೂ ಮತ ಎಣಿಕೆ ದಿನ ಬೆಳಗ್ಗೆ 7ರಿಂದ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಇಂದು ಸಂಜೆ 7 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸಂಜೆ 7ರ ನಂತರ 5ಕ್ಕೂ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಆದರೆ, ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ.ಮತದಾರರಲ್ಲದವರು ಇಂದು ಸಂಜೆ 7 ಗಂಟೆ ನಂತರ ಕ್ಷೇತ್ರ ಬಿಟ್ಟು ತೆರಳಬೇಕು. ಮತಗಟ್ಟೆಯ 3 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ಪ್ರಚಾರ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಎಡಗೈ ತೋರು ಬೆರಳಿಗೆ ಶಾಯಿ: ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರ ಎಡಗೈ ತೋರು ಬೆರಳಿಗೆ ಶಾಯಿ ಬಳಸಲು ಅನುಮತಿ ನೀಡಲಾಗಿದೆ.

 ಸ್ಥಳದಲ್ಲೇ ಚೀಟಿ: ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿರುವ ಮತದಾರರಿಗೆ ಈಗಾಗಲೇ ಭಾವಚಿತ್ರವುಳ್ಳ ಮತದಾನ ಚೀಟಿಯನ್ನು ವಿತರಿಸಲಾಗಿದ್ದು, ಒಂದು ವೇಳೆ ಮತದಾನ ಚೀಟಿ ದೊರೆಯದಿರುವವರು ಮತಗಟ್ಟೆ ಸಮೀಪ ಆಯೋಗದಿಂದ ಸ್ಥಾಪಿಸಲ್ಪಟ್ಟಿರುವ ವೋಟರ್ ಅಸಿಸ್ಟೆಂಟ್ ಬೂತ್‍ಗಳಲ್ಲಿ ವೋಟರ್ ಐಡಿ ಇಲ್ಲವೆ 11 ದಾಖಲಾತಿಗಳನ್ನು ತೋರಿಸಿ ಸ್ಥಳದಲ್ಲೇ ಮತದಾನ ಚೀಟಿ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಕ್ರಿಮಿನಲ್ ಕೇಸ್:ನಾಳೆ ಮಧ್ಯಾಹ್ನ 1.30ರೊಳಗೆ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೆಲಸ ಪೂರ್ಣಗೊಳಿಸಲಾಗುವುದು. ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿಗಳು 1.35ರೊಳಗೆ ಕರ್ತವ್ಯಕ್ಕೆ ಹಾಜರಾಗಲೇಬೇಕು. ಆನಂತರ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ಆದೇಶ ಚುನಾವಣಾ ಆಯೋಗ ನೀಡಿದೆ.

 ಪಿಂಕ್ ಮತಗಟ್ಟೆ:

ಮಹಿಳೆಯರು ತಮ್ಮ ಹಕ್ಕು ಚಲಾಯಿಸಲು ಮುಂದೆ ಬರಬೇಕೆಂಬ ಉದ್ದೇಶದಿಂದ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.  ಪಿಂಕ್ ಮತಗಟ್ಟೆಗಳೆಂದರೆ ಕೇವಲ ಮಹಿಳೆಯರು ಮಾತ್ರ ಮತ ಚಲಾಯಿಸಲು ಅವಕಾಶ ಕಲ್ಪಿಸುವುದಲ್ಲ. ಮಹಿಳಾ ಮತದಾರರು ಹೆಚ್ಚಿರುವ ಪ್ರದೇಶಗಳಲ್ಲಿ ಗುಲಾಬಿ ಬಣ್ಣದ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಆ ಮತಗಟ್ಟೆಗಳಲ್ಲಿ ಯಾರು ಬೇಕಾದರೂ ಮತ ಚಲಾಯಿಸಬಹುದು. ವಿಕಲಚೇತನರು ಮತ ಚಲಾಯಿಸಲು ಅನುಕೂಲವಾಗುವಂತೆ ವೀಲ್‍ಚೇರ್, ಬ್ರೈಲ್ ಲಿಪಿ ಮತ್ತು ವಾಹನ ವ್ಯವಸ್ಥೆ ಮಾಡಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.
ನಿರ್ಬಂಧ:

ಮತದಾನದ ದಿನ ಅಭ್ಯರ್ಥಿಗಳ ಪರ ದೂರದರ್ಶನ ಇಲ್ಲವೆ ಮುದ್ರಣ ಮಾಧ್ಯಮಗಳಲ್ಲಿ ಬೈಟ್ ಪ್ರಸಾರ ಮಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಕಾನೂನು ಉಲ್ಲಂಘಿಸುವ ಮಾಧ್ಯಮಗಳ ಮೇಲೂ ಕೇಸು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮೂರು ವಾಹನಗಳಿಗೆ ಮಾತ್ರ ಅನುಮತಿ:  ಮತದಾನದ ದಿನ ಅಭ್ಯರ್ಥಿ, ಏಜೆಂಟರುಗಳು ಸೇರಿ ಕೇವಲ ಮೂರು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಅನುಮತಿ ನೀಡಿರುವ ಕಾರಿನಲ್ಲಿ ಬೇರೆಯವರ ವೋಟರ್ ಐಡಿ ಕಾರ್ಡ್ ತೆಗೆದುಕೊಂಡು ಹೋಗುವಂತಿಲ್ಲ. ಮತಕೇಂದ್ರದಲ್ಲಿ ಚುನಾವಣಾಧಿಕಾರಿಗಳಿಗೆ ಮಾತ್ರ ಮೊಬೈಲ್ ಬಳಸಲು ಅವಕಾಶ ನೀಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಹೊರಗಿನಿಂದ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲು ಅಧಿಕಾರಿಗಳಿಗೆ ಆಯೋಗ ತಿಳಿಸಿದೆ.

 

Please follow and like us:
0
http://bp9news.com/wp-content/uploads/2018/05/kae-2018-2-28-1514437541.jpghttp://bp9news.com/wp-content/uploads/2018/05/kae-2018-2-28-1514437541-150x150.jpgBP9 Bureauಪ್ರಮುಖಬೆಂಗಳೂರುರಾಜಕೀಯಬೆಂಗಳೂರು : 224 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಮೇ 12ರಂದು ಚುನಾವಣೆ ನಡೆಯಲಿರುವುದರಿಂದ ಇಂದು ಸಂಜೆ 5 ಗಂಟೆಯಿಂದ ಎಲ್ಲಕಡೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ . ಇಂದು ಸಂಜೆ 5 ರಿಂದ ಮೇ 12ರ ಮಧ್ಯರಾತ್ರಿವರೆಗೂ ಮದ್ಯ ಮಾರಾಟ ಹಾಗೂ ಮತ ಎಣಿಕೆ ದಿನ ಬೆಳಗ್ಗೆ 7ರಿಂದ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ...Kannada News Portal