ಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಜಯಗಳಿಸಿದ್ದಾರೆ. ಜೂನ್ 8 ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಗೆಲುವಿನ ನಗೆಬೀರಿದ್ದಾರೆ.

ಜೆಡಿಎಸ್​​​​ ರಮೇಶ್ ಬಾಬು ಮತ್ತು ಕಾಂಗ್ರೆಸ್​​​ ಎಂ. ರಾಮಪ್ಪ ಅವರಿಗೆ ಸೋಲಾಗಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಗೆ ಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದರು. ಇನ್ನು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಗೆಲ್ಲುತ್ತಿದ್ದಂತೆ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದಾರೆ.

Please follow and like us:
0
http://bp9news.com/wp-content/uploads/2018/06/y-a-narayanaswamy.jpghttp://bp9news.com/wp-content/uploads/2018/06/y-a-narayanaswamy-150x150.jpgBP9 Bureauಪ್ರಮುಖಬೆಂಗಳೂರುರಾಜಕೀಯಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಜಯಗಳಿಸಿದ್ದಾರೆ. ಜೂನ್ 8 ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಗೆಲುವಿನ ನಗೆಬೀರಿದ್ದಾರೆ. ಜೆಡಿಎಸ್​​​​ ರಮೇಶ್ ಬಾಬು ಮತ್ತು ಕಾಂಗ್ರೆಸ್​​​ ಎಂ. ರಾಮಪ್ಪ ಅವರಿಗೆ ಸೋಲಾಗಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಗೆ ಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದರು. ಇನ್ನು ಆಗ್ನೇಯ...Kannada News Portal