ಬೆಂಗಳೂರು : ಸರ್ಕಾರ ಉರುಳಿಸುವ ಪ್ರಯತ್ನ ಮುಂದುವರೆಸಿದರೆ, ಜನರಿಗೆ ಹೇಳಿ ದಂಗೆ ಎಬ್ಬಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್​ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಶನಿವಾರ ಕೂಡ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಬಿಎಸ್​ವೈ ನಿವಾಸದ ಮುಂದೆ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ನಗರದ ಡಾಲರ್ಸ್​ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸದ ಮುಂದೆ, ನೂರಾರು ಪೊಲೀಸರನ್ನು ರಾಜ್ಯ ಪೊಲೀಸ್ ಇಲಾಖೆ ನಿಯೋಜನೆ ಮಾಡಿದೆ. ಮನೆ ಹಾಗೂ ಮುಖ್ಯ ರಸ್ತೆಯಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ, ಭದ್ರತೆ ನೀಡಲಾಗಿದೆ.

ಸಿಎಂ ಎಚ್​ಡಿಕೆ ಹೇಳಿಕೆ ಮತ್ತು ಯಡಿಯೂರಪ್ಪ ಮನೆ ಮುತ್ತಿಗೆ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಲಿದೆ. ಕುಮಾರಸ್ವಾಮಿ ಅವರ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಇಂದು ಸಂಜೆ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು ದಂಗೆ ಏಳಿಸುತ್ತೇನೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಸಾವಿರಾರು ಕೈ ಕಾರ್ಯಕರ್ತರು ಬಿಎಸ್​ವೈ ಮನೆಗೆ ಮುತ್ತಿಗೆ ಹಾಕಿದ್ದರು. ಅಲ್ಲದೇ, ಡಿಕೆಶಿ ಅಭಿಮಾನಿಗಳು ಇಂದು ಪ್ರತಿಭಟನೆಗೆ ಕರೆ ನೀಡಿದ್ದರು. ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಜೊತೆಗಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾರ್ಯಕರ್ತರು ಬಿಎಸ್​ವೈ ಮನೆ ಮುತ್ತಿಗೆ ಹಾಕಿದ್ದು ತಪ್ಪು, ನಿಮ್ಮ ಅಭಿಮಾನಿಗಳು ಇಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅವರಿಗೆ ಪ್ರತಿಭಟನೆ ನಡೆಸದಂತೆ ಹೇಳಿ ಎಂದು ಕೇಳಿಕೊಂಡಾಗ, ಡಿಕೆಶಿ ತಮ್ಮ ಅಭಿಮಾನಿಗಳಿಗೆ ಪ್ರತಿಭಟನೆ ಮಾಡದಂತೆ ಸೂಚನೆ ನೀಡಿದ್ದಾರೆ.

ಆದಾಗ್ಯೂ, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ಹೇಳಿಕೆ ಮತ್ತು ಬಿಎಸ್​ವೈ ಮನೆ ಮುತ್ತಿಗೆ ವಿರೋಧಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲು ಮುಂದಾಗಿ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮತ್ತು ಜೆಡಿಎಸ್​ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಬಹುದು. ಈ ಹಿನ್ನೆಲೆಯಲ್ಲಿ ಬಿಎಸ್​ವೈ ಮನೆಯ ಮುಂದೆ, ಮುಂಜಾಗ್ರತೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Please follow and like us:
0
http://bp9news.com/wp-content/uploads/2018/09/BSY-residence.pnghttp://bp9news.com/wp-content/uploads/2018/09/BSY-residence-150x150.pngBP9 Bureauಪ್ರಮುಖಬೆಂಗಳೂರುರಾಜಕೀಯಬೆಂಗಳೂರು : ಸರ್ಕಾರ ಉರುಳಿಸುವ ಪ್ರಯತ್ನ ಮುಂದುವರೆಸಿದರೆ, ಜನರಿಗೆ ಹೇಳಿ ದಂಗೆ ಎಬ್ಬಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್​ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಶನಿವಾರ ಕೂಡ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಬಿಎಸ್​ವೈ ನಿವಾಸದ ಮುಂದೆ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಗರದ ಡಾಲರ್ಸ್​ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸದ ಮುಂದೆ, ನೂರಾರು ಪೊಲೀಸರನ್ನು...Kannada News Portal