ಬೆಂಗಳೂರು : ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಮತದಾರರ ಮತ ಖಾತ್ರಿಪಡಿಸುವ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದ್ದು, ಮತದಾರರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಚುನಾವಣೆ ಆಯೋಗ ಹೇಳಿದೆ.

ವಿವಿ ಪ್ಯಾಟ್‍ಗಳ ಬಳಕೆ ಕುರಿತಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಪ್ರಾತ್ಯಕ್ಷಿತೆ ನೀಡುತ್ತ  ಈ ಹಿಂದೆ ಮತದಾನ ಸಂದರ್ಭದಲ್ಲಿ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಮಾತ್ರ ಬಳಸಲಾಗುತ್ತಿತ್ತು.  ಇದೇ ಮೊದಲ ಬಾರಿಗೆ ರಾಜ್ಯದಲ್ಲಿನ ಚುನಾವಣೆಯಲ್ಲಿ ಮತದಾರರ ಮತ ಖಾತ್ರಿ ಪಡಿಸುವ ವಿವಿಪ್ಯಾಟ್‍ಗಳನ್ನು ಬಳಸಲಾಗುತ್ತಿದೆ. ಜಿಲ್ಲೆಗೆ ಪೂರೈಕೆಯಾದ ಎಲ್ಲ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‍ಗಳನ್ನು ಬಿ.ಇ.ಎಲ್. ಇಂಜನೀಯರ್​​ಗಳ ತಂಡ ಪರಿಶೀಲನೆ ನಡೆಸಿ ಪ್ರಮಾಣಿಕರಿಸಿದೆ ಎಂದು ತಿಳಿಸಿದರು.

ವಿವಿ ಪ್ಯಾಟ್ (Voter-verified paper audit trail) ಬಳಕೆಯಿಂದ ಮತದಾರ ತನ್ನ ಮತವನ್ನು ಯಾರಿಗೆ ಮತದಾನ ಮಾಡಿದ್ದೇನೆ ಎಂಬುದನ್ನು ಮತದಾನ ಮಾಡಿದ ಕ್ಷಣದಲ್ಲಿ ವೀಕ್ಷಿಸಬಹುದಾಗಿದೆ. ಬ್ಯಾಲೆಟ್ ಯೂನಿಟ್‍ನಲ್ಲಿ ಮತಗುಂಡಿ ಒತ್ತಿದ ನಂತರ, ಮತದಾರ, ತಾನು ಮತದಾನ ಮಾಡಿದ ವಿವರ ವಿವಿಪ್ಯಾಟ್‍ನಲ್ಲಿ ಏಳು ಸೆಕೆಂಡ್‍ವರೆಗೆ ಪ್ರದರ್ಶನಗೊಳ್ಳಲಿದೆ. ಇದನ್ನು ಮತ ಚಲಾಯಿಸಿದ ಮತದಾರ ಮಾತ್ರ ವೀಕ್ಷಿಸಲು ಅವಕಾಶವಿರುತ್ತದೆ. ಇದರಿಂದ ಯಾವುದೇ ಗೊಂದಲ, ಸಮಸ್ಯೆ, ಅನುಮಾನಗಳು ಮತದಾರನಿಗೆ ತಾನು ಮತಚಲಾಯಿಸಿದ ವ್ಯಕ್ತಿ ಅಥವಾ ಚಿಹ್ನೆಗೆ ಮತದಾನವಾದ ಕುರಿತಂತೆ ಖಾತ್ರಿಪಡಿಸಿಕೊಂಡು ಮತಗಟ್ಟೆಯ ಕೊಠಡಿಯಿಂದ ತೆರಳಬಹುದಾಗಿದೆ.
ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಹಾಗೂ ವಿವಿಪ್ಯಾಟ್‍ಗಳು ಪ್ರತಿ ಮತಗಟ್ಟೆಗೆ ಪೂರೈಸಲಾಗುವುದು. ವಿವಿಪ್ಯಾಟ್‍ಗಳ ವಿ.ಎಸ್.ಡಿ. ಯೂನಿಟ್ ನಿರ್ವಹಣೆಗಾಗಿ ಹೆಚ್ಚುವರಿ ಸಿಬ್ಬಂದಿಗಳನ್ನು ಪ್ರತಿಮತಗಟ್ಟೆಗೆ ನಿಯೋಜಿಸಲಾಗುವುದು.

ವಿವಿಪ್ಯಾಟ್‍ಗಳು ಅತ್ಯಂತ ವಿಶ್ವಾರ್ಹವಾಗಿವೆ. ಭಾರತ ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ಬಿ.ಇ.ಎಲ್. ಕಂಪನಿಯ ತಾಂತ್ರಿಕ ತಂಡ ಯಂತ್ರಗಳನ್ನು ಅಭಿವೃದ್ಧಿಪಡಿಸಿದೆ.  ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ವಿವಿಪ್ಯಾಟ್‍ಗಳನ್ನು ಬಳಸಲಾಗುತ್ತಿದೆ. ಇದರಿಂದ ಮತದಾನ ವ್ಯವಸ್ಥೆಯ ಬಗ್ಗೆ ಮತದಾರರಿಗೆ ದೃಢವಿಶ್ವಾಸ ಬರಲಿದೆ ಎಂದು ತಿಳಿಸಿದರು.

ವಿವಿಪ್ಯಾಟ್‍ಗಳ ಬಳಕೆ, ಕಾರ್ಯನಿರ್ವಹಣೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್‍ಗಳ ಸಂಪರ್ಕ ಕುರಿತಂತೆ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ನಿತೀನ್ ಅವರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಪ್ರಾತ್ಯಕ್ಷಿತೆ ನೀಡಿದರು. ಈ ಸಂದರ್ಭದಲ್ಲಿ ಅಣುಕು ಮತದಾನ ನಡೆಸಿ ವಿವಿಪ್ಯಾಟ್‍ನಲ್ಲಿ ಮತದಾನದ ಖಾತ್ರಿ ಕುರಿತಂತೆ ಮನವರಿಕೆ ಮಾಡಿಕೊಡಲಾಯಿತು.

ಬಿಪಿ9 ನ್ಯೂಸ್​​

 

Please follow and like us:
0
http://bp9news.com/wp-content/uploads/2018/03/VVPAT-big-1024x685.jpghttp://bp9news.com/wp-content/uploads/2018/03/VVPAT-big-150x150.jpgBP9 Bureauಅಂಕಣಪ್ರಮುಖಬೆಂಗಳೂರುಬೆಂಗಳೂರು : ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಮತದಾರರ ಮತ ಖಾತ್ರಿಪಡಿಸುವ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದ್ದು, ಮತದಾರರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಚುನಾವಣೆ ಆಯೋಗ ಹೇಳಿದೆ. ವಿವಿ ಪ್ಯಾಟ್‍ಗಳ ಬಳಕೆ ಕುರಿತಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಪ್ರಾತ್ಯಕ್ಷಿತೆ ನೀಡುತ್ತ  ಈ ಹಿಂದೆ ಮತದಾನ ಸಂದರ್ಭದಲ್ಲಿ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಮಾತ್ರ ಬಳಸಲಾಗುತ್ತಿತ್ತು.  ಇದೇ ಮೊದಲ ಬಾರಿಗೆ ರಾಜ್ಯದಲ್ಲಿನ ಚುನಾವಣೆಯಲ್ಲಿ...Kannada News Portal