ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗುತ್ತಿದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ತಮ್ಮ ಪಕ್ಷದ ಎಷ್ಟು ಶಾಸಕರ ಗೆಲುವಿಗೆ ಹೆಲ್ಪ್ ಆಗುತ್ತೆ ಅನ್ನೋ ಲೆಕ್ಕಾಚಾರದಲ್ಲಿ ಮೂರು ಪಕ್ಷಗಳ ಪ್ರಮುಖ ನಾಯಕರು ತೊಡಗಿದ್ದಾರೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿದ್ದು, ಎರಡು ಕ್ಷೇತ್ರದಲ್ಲಿ ಕಣಕ್ಕಿಳಿಯುವ ಯೋಚನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಒಂದು ಚಾಮುಂಡೇಶ್ವರಿ ಕ್ಷೇತ್ರ ಮತ್ತೊಂದು ಉತ್ತರ ಕರ್ನಾಟಕದ ಒಂದು ಕ್ಷೇತ್ರ. ಕೊಪ್ಪಳ ಜಿಲ್ಲೆ, ಬಾಗಲಕೋಟೆ ಜಿಲ್ಲೆಯ ಸುರಕ್ಷಿತ ಕ್ಷೇತ್ರದಲ್ಲಿ ಕಣಕ್ಕಿಳಿಯುವ ಯೋಚನೆ ಸಿದ್ದರಾಮಯ್ಯರದ್ದಾಗಿದೆ. ಇದು ಉತ್ತರ ಕರ್ನಾಟಕ ಭಾಗದ ಇತರೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೂ ಸಹಾಯವಾಗಲಿದೆ ಎನ್ನುವ ಕಾರಣಕ್ಕೆ ಕಣಕ್ಕಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಆಪ್ತರು ಇಂತಹ ಸಲಹೆ ನೀಡಿದ್ದು ಇನ್ನಷ್ಟೇ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಅಲ್ಲಿಯವರೆಗೂ ಅಂತೆ ಕಂತೆಗಳ ಗಾಳಿ ಸುದ್ದಿಗಳು ರಾಜ್ಯದಲ್ಲಿ ಹರಿದಾಡುತ್ತಿರುತ್ತದೆ.

Please follow and like us:
0
http://bp9news.com/wp-content/uploads/2018/01/siddaramaih_pink_turban_fb_750x500.jpghttp://bp9news.com/wp-content/uploads/2018/01/siddaramaih_pink_turban_fb_750x500-150x150.jpgPolitical Bureauಕೊಪ್ಪಳಪ್ರಮುಖಮೈಸೂರುರಾಜಕೀಯ  ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗುತ್ತಿದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ತಮ್ಮ ಪಕ್ಷದ ಎಷ್ಟು ಶಾಸಕರ ಗೆಲುವಿಗೆ ಹೆಲ್ಪ್ ಆಗುತ್ತೆ ಅನ್ನೋ ಲೆಕ್ಕಾಚಾರದಲ್ಲಿ ಮೂರು ಪಕ್ಷಗಳ ಪ್ರಮುಖ ನಾಯಕರು ತೊಡಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿದ್ದು, ಎರಡು ಕ್ಷೇತ್ರದಲ್ಲಿ ಕಣಕ್ಕಿಳಿಯುವ ಯೋಚನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಒಂದು ಚಾಮುಂಡೇಶ್ವರಿ ಕ್ಷೇತ್ರ ಮತ್ತೊಂದು ಉತ್ತರ ಕರ್ನಾಟಕದ ಒಂದು ಕ್ಷೇತ್ರ. ಕೊಪ್ಪಳ ಜಿಲ್ಲೆ, ಬಾಗಲಕೋಟೆ ಜಿಲ್ಲೆಯ ಸುರಕ್ಷಿತ ಕ್ಷೇತ್ರದಲ್ಲಿ ಕಣಕ್ಕಿಳಿಯುವ...Kannada News Portal