fbpx

ಆದಿಚುಂಚನಗಿರಿ ಮಠ

ಪುರಾಣ ಪ್ರಸಿದ್ಧವೂ, ಪವಿತ್ರವೂ ಆದ ಶ್ರೀ ಆದಿಚುಂಚನಗಿರಿ ಕ್ಷೇತ್ರವು ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನಲ್ಲಿದೆ. ಇದು ಬೆಂಗಳೂರಿನಿಂದ 110 ಕಿಲೋಮೀಟರ್ ದೂರದಲ್ಲಿದೆ. ಬೆಂಗಳೂರಿನಿಂದ ಮಂಗಳೂರು ರಾ.ಹೆ.47 ರಲ್ಲಿ ಸಾಗಿ ಬೆಳ್ಳೂರು ಕ್ರಾಸ್‍ಗೆ ತಲುಪಿದರೆ, ಅಲ್ಲಿಂದ ಸುಮಾರು 08 ಕಿ.ಮೀ. ಅಂತರದಲ್ಲಿ ಆದಿಚುಂಚನಗಿರಿಯ ಬೆಟ್ಟ ಸಿಗುತ್ತದೆ. ಮೈಸೂರಿನಿಂದ ತುಮಕೂರಿಗೆ ಹೋಗುವ ಹೆದ್ದಾರಿಯಲ್ಲಿ ಬೆಳ್ಳೂರಿಗೆ 2 ಮೈಲಿಗಳ ದೂರದಲ್ಲಿ ಚುಂಚನಹಳ್ಳಿಯೆಂಬ ಚಿಕ್ಕ ಗ್ರಾಮವು ಚುಂಚನಗಿರಿಯ ತಪ್ಪಲಿನಲ್ಲಿದೆ. ಉತ್ತರದಕ್ಷಿಣವಾಗಿ ಹಬ್ಬಿರುವ ಕಲ್ಲು-ಬಂಡೆಗಳಿಂದ ಕೂಡಿದ ಈ ಗಿರಿಯು ಸಮುದ್ರ ಮಟ್ಟದಿಂದ ಸುಮಾರು 3221 ಅಡಿ ಎತ್ತರವಾಗಿದೆ. ಹಸಿರು ಕಾನನಗಳಿಂದ ಕೂಡಿ, ರಮಣೀಯವೂ, ಪ್ರಶಾಂತವೂ ಆದ ಈ ಕ್ಷೇತ್ರವು ಪರಶಿವನ ತಪೋಭೂಮಿಯಾಗಿದ್ದಿತೆಂದು ಪುರಾಣ ಮತ್ತು ಜನಪದ ಸಾಹಿತ್ಯದಿಂದ ತಿಳಿದುಬರುತ್ತದೆ. ಗಂಗಾಧರೇಶ್ವರನು ಇಲ್ಲಿಯ ಅಧಿದೇವತೆ. ಕಾಲಭೈರವೇಶ್ವರನು ಇಲ್ಲಿಯ ಕ್ಷೇತ್ರಪಾಲಕನು.                                                           Read More…….

 

ಆದಿಚುಂಚನಗಿರಿ ಮಠ

ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಚುಂಚಾದ್ರಿ ಕಲೋತ್ಸವ!!!

ರಾಮನಗರ : ಗುರುಪೂರ್ಣಿಮೆಯ ಅಂಗವಾಗಿ  ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಚುಂಚಾದ್ರಿ ಕಲೋತ್ಸವ ಹಾಗೂ SSLC ಪರೀಕ್ಷೆಯಲ್ಲಿ A+ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.…
ಹೆಚ್ಚಿನ ಸುದ್ದಿಗಾಗಿ...
ಆದಿಚುಂಚನಗಿರಿ ಮಠ

ನಿರ್ಮಲಾನಂದನಾಥ ಸ್ವಾಮಿಜಿಯವರ ಅಪರೂಪದ ಸಂದರ್ಶನ

ನಿರ್ಮಲನಾಥನಂದ ಸ್ವಾಮೀಜಿಯವರನ್ನು ರಾಜೀವ್​ ಮಲ್ಹೋತ್ರ ರವರು ಮಾಡಿರುವ ಅಪರೂಪದ ಸಂದರ್ಶನ
ಹೆಚ್ಚಿನ ಸುದ್ದಿಗಾಗಿ...