ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಲೆ ಎದ್ದಿರುವುದರಿಂದ  ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಗೆಲುವು ಖಚಿತ ಎಂದು ಮಾಜಿ ಸಂಸದ ಕಾಗಲವಾಡಿ ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜೊತೆ   ತಾಲೂಕಿನ ಕಾಗಲವಾಡಿ, ಆಲೂರು, ಮಲ್ಲುಪುರ ಸೇರಿದಂತೆ ವಿವಿಧ  ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಬಿರುಸಿನ ಪ್ರಚಾರ ನಡೆಯಿಸಿ ಮತ ಯಾಚನೆ ಮಾಡಿಮಾತನಾಡಿದರು.

ಬಿ.ಎಸ್.ಯಡಿಯೂರಪ್ಪ ರವರು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಅದರಲ್ಲೂ ಚಾಮರಾಜನಗರ ಜಿಲ್ಲೆಯ 21 ಕೆರೆಗಳಿಗೆ ಕಬಿನಿ ನೀರಿನಿಂದ ನೀರು ತುಂಬಿಸುವ ಮೂಲಕ ರೈತರ ಸಮಸ್ಯೆಯನ್ನು ಶಾಶ್ವತವಾಗಿ ಹೋಗಲಾಡಿಸಿದ್ದಾರೆ. ಇದಲ್ಲದೆ ರೈತರ ಸಾಲ ಮನ್ನಾ, ಭಾಗ್ಯಲಕ್ಷ್ಮಿ ಯೋಜನೆ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ಹಾಲು ಉತ್ಪಾದಕರಿಗೆ  ಪ್ರೋತ್ಸಾಹ ಧನ ಸೇರಿದಂತೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಎಲ್ಲಾ ವರ್ಗದವರಿಗೂ ಅನುಕೂಲ ಮಾಡಿಕೊಟ್ಟಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ಸಹ ಕೇಂದ್ರದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಶ್ರೀ ಸಾಮನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ ಎಂದ ಅವರು,

ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಎರಡು ಬಾರಿ ಶಾಸಕರಾಗಿದ್ದರು ಕ್ಷೇತ್ರಕ್ಕೆ ಯಾವುದೇ ಅಭಿವೃದ್ದಿ  ಕೆಲಸ ಮಾಡಿಲ್ಲ. ಕ್ಷೇತ್ರದ ಯಾವುದೇ ಗ್ರಾಮಕ್ಕೆ ಹೋದರು ಸಹ ಅಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಜಿಲ್ಲಾ ಕೇಂದ್ರ ಸ್ಥಿತಿ ನೋಡಿದರೆ ಶಾಸಕರ ಎಷ್ಟು ಅಭಿವೃದ್ದಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಉಪ್ಪಾರ ಸಮುದಾಯದ ಮತಗಳನ್ನು ಹೆಚ್ಚು ಪಡೆದು ಶಾಸಕರಾಗಿ ಆಯ್ಕೆಯಾಗಿ ಆ ವರ್ಗದ ಅಭಿವೃದ್ದಿಗೂ ಸಹ ಶ್ರಮಿಸಿಲ್ಲ. ಇನ್ನು ಯಾವುದೇ ಅಧಿವೇಶನದಲ್ಲಿ ಒಂದು 10 ನಿಮಿಷ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಿ, ಸರ್ಕಾರದ ಗಮನ ಸೆಳೆದಿಲ್ಲ. ಇದರಿಂದ ಇಂತವರನ್ನು ಮತ್ತೆ ಆಯ್ಕೆ ಮಾಡಬೇಕೆ ಎಂದು ಪ್ರಶ್ನಿಸಿದರು.

ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಲೆ ಎದ್ದಿದ್ದು, ಚಾಮರಾಜನಗರ ಕ್ಷೇತ್ರದಲ್ಲಿಯೂ ಸಹ ಬಿಜೆಪಿ ಗಾಳಿ ಬೀಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರು 10 ಸಾವಿರಕ್ಕೂ ಹೆಚ್ಚು ಅತ್ಯಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ,  ಮಾಜಿ ಶಾಸಕ ಸಿ.ಗುರುಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾಗಶ್ರೀಪ್ರತಾಪ್, ಎಸ್.ಮಹದೇವಯ್ಯ. ಆಲೂರು ನಟರಾಜ್,  ರೈತ ಮುಖಂಡ ಮಲ್ಲೇಶ್, ತಾ.ಪಂ.ಉಪಾಧ್ಯಕ್ಷ ದಯಾನಿಧಿ, ನಿವೃತ್ತ ಸಬ್ ಇನ್ಸ್‍ಪೆಕ್ಟರ್ ಶಿವಸ್ವಾಮಿ, ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ತಾ,ಪಂ ಮಾಜಿ ಸದಸ್ಯ ಶಿವಸ್ವಾಮಿ, ದಲಿತ ಮುಖಂಡ ವೆಂಕಟರಮಣಸ್ವಾಮಿ,  ಆಲೂರು ಬಾಬು, ಕಾಗಲವಾಡಿ ಕಾರ್ತಿಕ್, ಕಾಡಹಳ್ಳಿ ಕುಮಾರ್, ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

Please follow and like us:
0
http://bp9news.com/wp-content/uploads/2018/05/BJP-1.jpghttp://bp9news.com/wp-content/uploads/2018/05/BJP-1-150x150.jpgBP9 Bureauಚಾಮರಾಜನಗರರಾಜಕೀಯಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಲೆ ಎದ್ದಿರುವುದರಿಂದ  ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಗೆಲುವು ಖಚಿತ ಎಂದು ಮಾಜಿ ಸಂಸದ ಕಾಗಲವಾಡಿ ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜೊತೆ   ತಾಲೂಕಿನ ಕಾಗಲವಾಡಿ, ಆಲೂರು, ಮಲ್ಲುಪುರ ಸೇರಿದಂತೆ ವಿವಿಧ  ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಬಿರುಸಿನ ಪ್ರಚಾರ ನಡೆಯಿಸಿ ಮತ ಯಾಚನೆ ಮಾಡಿಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ರವರು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನಪರ...Kannada News Portal