ಚಾಮರಾಜನಗರ: ಚಾಮರಾಜನಗರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿ ಮಹೇಶ್ ಪ್ರಚಾರದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.

ತ್ರಿಕೋನ ಸ್ಪರ್ಧೆಯಲ್ಲಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ರಂಗು ಏರುತ್ತಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿ ಪಕ್ಷದ ಆನೆಯಂತು ಇಲ್ಲಿ ಭಾರಿ ಸದ್ದು ಮಾಡುತ್ತಿದೆ.

ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆನೆ ನಡೆದಿದ್ದೇ ಹಾದಿಯಂತಾಗಿದೆ. ಬಿಎಸ್‍ಪಿ ರಾಜ್ಯಾಧ್ಯಕ್ಷರೂ ಆಗಿರುವ ಅಭ್ಯರ್ಥಿ ಎನ್.ಮಹೇಶ್ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಆರತಿ ಎತ್ತುವುದರ ಮೂಲಕ ಜನರು ಅಲ್ಲಲ್ಲಿ ಆಶೀರ್ವದಿಸುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಮನೆಗಳನ್ನು ಎರಡೆರಡು ಬಾರಿ ತಲುಪಿರೋ ಮಹೇಶ್, ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

Please follow and like us:
0
http://bp9news.com/wp-content/uploads/2018/05/Karnatakada-Miditha-13.jpeghttp://bp9news.com/wp-content/uploads/2018/05/Karnatakada-Miditha-13-150x150.jpegBP9 Bureauಚಾಮರಾಜನಗರರಾಜಕೀಯಚಾಮರಾಜನಗರ: ಚಾಮರಾಜನಗರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿ ಮಹೇಶ್ ಪ್ರಚಾರದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ರಂಗು ಏರುತ್ತಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿ ಪಕ್ಷದ ಆನೆಯಂತು ಇಲ್ಲಿ ಭಾರಿ ಸದ್ದು ಮಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆನೆ ನಡೆದಿದ್ದೇ ಹಾದಿಯಂತಾಗಿದೆ. ಬಿಎಸ್‍ಪಿ ರಾಜ್ಯಾಧ್ಯಕ್ಷರೂ ಆಗಿರುವ ಅಭ್ಯರ್ಥಿ ಎನ್.ಮಹೇಶ್ ಕ್ಷೇತ್ರಾದ್ಯಂತ ಬಿರುಸಿನ...Kannada News Portal