ಚಾಮರಾಜನಗರ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯ  ಗೆಲುವು ಮುಂಬರುವ 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ದಿಕ್ಸೂಚಿಯಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ  ಮಾ. 24ರ ಜಿಲ್ಲಾ ಪ್ರವಾಸ ಕುರಿತು ಪೂರ್ವಭಾವಿ ಸಭೆ ಹಾಗು ನವೀಕೃತ ಜಿಲ್ಲಾ  ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಗ್ರಾಮ ಪಂಚಾಯಿತಿಯಿಂದ  ದೆಹಲಿಯ ವರೆಗೆ ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದೆ. ಹಿನ್ನೆಲೆಯಲ್ಲಿ ಜಿಲ್ಲೆಗೆ  ಪ್ರಪ್ರಥಮಬಾರಿಗೆ  ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಇಂದಿರಾಗಾಂಧಿ ಅವರು ಜಿಲ್ಲೆಗೆ ಭೇಟಿ ನೀಡಿದ್ದರು. ಸೋನಿಯಾಗಾಂಧಿ ಅವರು ಯಳಂದೂರಿಗೆ ಆಗಮಿಸಿದ್ದರು. ಈಗ  ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್‍ಗಾಂಧಿ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ನಾಲ್ಕು ಕ್ಷೇತ್ರಗಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ  ಅವರ ಪ್ರವಾಸವನ್ನು ಅಭೂತ ಪೂರ್ವ ಯಶಸ್ಸು ಗಳಿಸುವ ಹೊಣೆ  ನಮ್ಮದಾಗಿದೆ ಎಂದರು.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಿದ್ದರು, ಕನಿಷ್ಟ  20 ಸಾವಿರ ಮಂದಿ ಕಾರ್ಯಕರ್ತರು ಭಾಗಿಯಾಗುವಂತೆ ನೋಡಿಕೊಳ್ಳಬೇಕು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋಗಳಲ್ಲಿ 10 ರಿಂದ 15 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಶಾಸಕರು, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು  ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಿಳೀಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಪ್ರಸ್ತಾವಿಕವಾಗಿ  ಯುವ ನೇತಾರರಾದ ರಾಹುಲ್ ಗಾಂಧಿ ಅವರ ಪ್ರವಾಸವನ್ನು ಯಶಸ್ವಿಗೊಳಿಸಲು ಪಕ್ಷದ ಎಲ್ಲಾ ಮುಖಂಡರು ಹಾಗು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಜನರು ಭಾಗವಹಿಸುವಂತೆ ಮಾಡಲು ಸ್ಥಳೀಯ ಶಾಸಕರು ಹಾಗೂ ಜಿ.ಪಂ.ತಾ.ಪಂ ಚುನಾಯಿತ ಪ್ರತಿನಿಧಿಗಳು  ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ  ಶಾಸಕರಾದ ಆರ್. ನರೇಂದ್ರ. ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಮುಖಂಡರಾದ ಎಚ್.ಸಿ. ಬಸವರಾಜು, ಎ. ಸಿದ್ದರಾಜು, ಲೋಕೇಶ್, ಮಾಜಿ ಶಾಸಕ  ಎಸ್. ಬಾಲರಾಜು, ಜಿ.ಪಂ. ಪ್ರಭಾರ ಅಧ್ಯಕ್ಷ ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಮಾಜಿ ಅಧ್ಯಕ್ಷರಾದ ಸೈಯದ್ ರಫಿ, ಮುಖಂಡರಾದ ಕಾಗಲವಾಡಿ ಚಂದ್ರು,ಅರುಣ್‍ಕುಮಾರ್, ಬಾಗಳಿ ಪುಟ್ಟಬುದ್ದಿ, ಮೊದಲಾದವರು ಇದ್ದರು.

Please follow and like us:
0
http://bp9news.com/wp-content/uploads/2018/03/Congress.jpghttp://bp9news.com/wp-content/uploads/2018/03/Congress-150x150.jpgBP9 Bureauಚಾಮರಾಜನಗರಚಾಮರಾಜನಗರ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯ  ಗೆಲುವು ಮುಂಬರುವ 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ದಿಕ್ಸೂಚಿಯಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ  ಮಾ. 24ರ ಜಿಲ್ಲಾ ಪ್ರವಾಸ ಕುರಿತು ಪೂರ್ವಭಾವಿ ಸಭೆ ಹಾಗು ನವೀಕೃತ ಜಿಲ್ಲಾ  ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆ ಕಾಂಗ್ರೆಸ್...Kannada News Portal