ಚಾಮರಾಜನಗರ : ಇಂದಿನ ಯುಗವು ಸ್ಪರ್ಧಾತ್ಮಕ ಯುಗವಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನವನ್ನು  ಬೆಳೆಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸಂಸದ ಆರ್.ಧ್ರುವನಾರಾಉಣ್ ಸಲಹೆ ನೀಡಿದರು.

ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರೇಷ್ಮೆ ಇಲಾಖೆ ಕಟ್ಟಡಕ್ಕೆ ನೂತನವಾಗಿ ಸ್ಥಳಾಂತರವಾದ ಹಿನ್ನಲೆಯಲ್ಲಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಪಟ್ಟಣದ ಪೇಟೆ  ಪ್ರೈಮರಿ ಶಾಲಾ ಆವರಣದಲ್ಲಿ ನಡೆದ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಪೀಠೋಪಕರಣಗಳ ಕೊರತೆ ಇದ್ದ ಪರಿಣಾಮ ಶಾಸಕರು ಮುತುವರ್ಜಿ ವಹಿಸಿ ಇಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರೇಷ್ಮೆ ಇಲಾಖೆ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದು ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯ ಹಾಗೂ ಪೀಠೋಪಕರಣಗಳನ್ನು ಕಲ್ಪಿಸಲು ಕ್ರಮವಹಿಸುವುದಾಗಿ ತಿಳಿಸಿದರು.

ಶಾಸಕ ಸಿ.ಪುಟ್ಟರರಂಗಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ಸದಸ್ಯರ ಮನವಿ ಮೇರೆಗೆ ಶಿಥಿಲಾವಸ್ಥಿ ಕೊಠಡಿಗಳು,ಮೂಲಭೂತ ಸೌಕರ್ಯದ ಕೊರತೆಯಿಂದ ಕೂಡಿರುವುದರ ಕುರಿತು ತಮ್ಮ ಗಮನಕ್ಕೆ ತಂದ ಹಿನ್ನಲೆ ಇಂದು ರೇಷ್ಮೆ ಇಲಾಖೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು ಕಾಲೇಜಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು.

ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಈ ಮೂಲಕ ಮಹಿಳೆಯರಿಗೂ ಉಚಿತವಾಗಿ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಿ ಅವರು ಉನ್ನತ ವಿಧ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆದು ಮುಂದೆ ಬರಲಿ ಎನ್ನು ಸದುದ್ದೇಶವಾಗಿದೆ.ಹೀಗಾಗಿ ಉನ್ನತ ವಿಧ್ಯಾಭ್ಯಾಸ ಮಾಡಿ ಸುಶಿಕ್ಷಿತರಾಗಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್,ಪ್ರಾಂಶುಪಾಲ ಸುಮತಿ,ಪರ್ವತರಾಜ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

Please follow and like us:
0
http://bp9news.com/wp-content/uploads/2018/03/MP.jpghttp://bp9news.com/wp-content/uploads/2018/03/MP-150x150.jpgBP9 Bureauಚಾಮರಾಜನಗರಚಾಮರಾಜನಗರ : ಇಂದಿನ ಯುಗವು ಸ್ಪರ್ಧಾತ್ಮಕ ಯುಗವಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನವನ್ನು  ಬೆಳೆಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸಂಸದ ಆರ್.ಧ್ರುವನಾರಾಉಣ್ ಸಲಹೆ ನೀಡಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರೇಷ್ಮೆ ಇಲಾಖೆ ಕಟ್ಟಡಕ್ಕೆ ನೂತನವಾಗಿ ಸ್ಥಳಾಂತರವಾದ ಹಿನ್ನಲೆಯಲ್ಲಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣದ ಪೇಟೆ  ಪ್ರೈಮರಿ ಶಾಲಾ ಆವರಣದಲ್ಲಿ ನಡೆದ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಪೀಠೋಪಕರಣಗಳ ಕೊರತೆ ಇದ್ದ ಪರಿಣಾಮ ಶಾಸಕರು...Kannada News Portal