ಚಿಕ್ಕಬಳ್ಳಾಪುರ: ಮೂಲ ಸೌಕಯ ನೀಡಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ತಾಲೂಕು ಕಛೇರಿ ಮುಂಭಾಗದ ಯೋಗಿ ನಾರಾಯಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಸುರೇಶ್ ಮಾತನಾಡಿ, ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಮೂರು ಸಾವಿರ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಬರುವ ವಿದ್ಯಾರ್ಥಿನಿಯರು ಬಡ, ದೀನ, ದಲಿತ ರೈತಾಪಿ ವರ್ಗಕ್ಕೆ ಸೇರಿದ ಹಳ್ಳಿಗಾಡಿನ ಪ್ರದೇಶದವರಾಗಿದ್ದಾರೆ.

ಆದರೇ ಕಾಲೇಜಿನಲ್ಲಿ ಕನಿಷ್ಟ ಮೂಲ ಸೌಕರ್ಯವಾದ ಕುಡಿಯುವ ನೀರೂ ಇಲ್ಲದೇ ಪರಿತಪ್ಪಿಸುವಂತಾಗಿಧೆ. ನೀರಿನ ಮೂಲವಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲೇಜಿನಲ್ಲಿ ಕುಡಿಯುವ ನೀರಿನ ಅಭಾವ ಇದೆ. ನೀರಿನ ಸಮಸ್ಯೆ ನಿವಾರಣೆಗೆ ಕ್ಷೇತ್ರದ ಶಾಸಕರು ಹಾಗೂ ನಗರಸಭೆ ಅಧ್ಯಕ್ಷರು ಮುಂದಾಗಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ವಿಭಾಗ ಸಂಚಾಲಕ ಮಂಜುನಾಥರೆಡ್ಡಿ ಮಾತನಾಡಿ, ಬಹಳಷ್ಟು ಬಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಮೂಲ ಸೌಕರ್ಯ ತೊಂದರೆಯಿಂದ ಬಹಳಷ್ಟು ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನೇ ಅರ್ಧಕ್ಕೆ ಮಟಕುಗೊಳಿಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

ನಗರಸಭೆಯ ಅಧ್ಯಕ್ಷೆ ಸುಜಾತ ಶಿವಣ್ಣ ಅವರಿಗೆ ಮನವಿ ಸಲ್ಲಿಸಿದರು. ತೇಜು, ಸೌಚನ್ಯ, ಸ್ನೇಹ, ಶಿರೀಷ ಹಾಗೂ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

ವರದಿ: ಪ್ರಶಾಂತ್ ಚಿಕ್ಕಬಳ್ಳಾಪುರ

Please follow and like us:
0
http://bp9news.com/wp-content/uploads/2017/12/cbp4_TUM.jpghttp://bp9news.com/wp-content/uploads/2017/12/cbp4_TUM-150x150.jpgBP9 Bureauಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ: ಮೂಲ ಸೌಕಯ ನೀಡಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ತಾಲೂಕು ಕಛೇರಿ ಮುಂಭಾಗದ ಯೋಗಿ ನಾರಾಯಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಸುರೇಶ್ ಮಾತನಾಡಿ, ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಮೂರು ಸಾವಿರ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಬರುವ ವಿದ್ಯಾರ್ಥಿನಿಯರು ಬಡ, ದೀನ, ದಲಿತ ರೈತಾಪಿ...Kannada News Portal