ಬೆಂಗಳೂರು : ರೈತರ ಸಾಲ ಮನ್ನಾ ಮಾಡುವ ರಾಜ್ಯ ಸರ್ಕಾರದ ಕ್ರಮಕ್ಕೆ ಶೇ50ರಷ್ಟು ನೆರವು ನೀಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಪ್ರಧಾನಮಂತ್ರಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಉಲ್ಬಣಗೊಂಡಿರುವ ಕೃಷಿ ಬಿಕ್ಕಟ್ಟಿನ ನಿರ್ವಹಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈ ಜೋಡಿಸಬೇಕು.

ರಾಜ್ಯದಲ್ಲಿ 85 ಲಕ್ಷ ರೈತರು ಬ್ಯಾಂಕುಗಳಿಂದ ಕೃಷಿ ಸಾಲ ಪಡೆದಿದ್ದಾರೆ. ಮತ್ತೆ ಮತ್ತೆ ಎರಗುವ ಬರಗಾಲ ಕಾರಣ ರೈತರ ಬವಣೆ ಮತ್ತಷ್ಟು ತೀವ್ರಗೊಂಡಿದೆ. ರೈತರ ಉತ್ಪನ್ನಗಳಿಗೆ ಲಾಭದಾಯಕ ಧಾರಣೆಗಳು ಸಿಗುತ್ತಿಲ್ಲ. ಗ್ರಾಮೀಣ ಋಣಭಾರ ಮುಖಕ್ಕೆ ರಾಚುವಂತೆ ಬೆಳೆಯತೊಡಗಿದೆ. ಈ ಬಿಕ್ಕಟ್ಟಿನ ನಿರ್ವಹಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೈ ಜೋಡಿಸಬೇಕು. ರೈತರ ಋಣಭಾರ ತಗ್ಗಿಸಲು ಕರ್ನಾಟಕ ಸರ್ಕಾರ ಸಾಕಷ್ಟು ಕ್ರಮಗಳನ್ನು ಜರುಗಿಸಿದೆ. ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕೃಷಿ ಮಾರುಕಟ್ಟೆ ಸುಧಾರಣೆಗಳು ಮತ್ತು ಮಣ್ಣಿನ ಆರೋಗ್ಯ ಪರೀಕ್ಷೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. 2015-16 ಮತ್ತು 2016-17ನೆಯ ಸಾಲುಗಳಲ್ಲಿ 78.32 ಲಕ್ಷ ಮಣ್ಣು ಪರೀಕ್ಷೆಯ ಕಾರ್ಡ್ ಗಳನ್ನು ವಿತರಿಸಲಾಗಿದೆ. ಹವಾಮಾನ ವೈಪರೀತ್ಯಗಳನ್ನು ಸಹಿಸಿಕೊಳ್ಳುವ ಕೃಷಿಯನ್ನು ಅಭಿವೃದ್ಧಿಪಡಿಸಬೇಕಿದೆ. ಭಾರೀ ವಿಸ್ತೀರ್ಣದ ಮಳೆಯಾಶ್ರಿತ ಕೃಷಿ ಭೂಮಿ ಹವಾಮಾನ ಬದಲಾವಣೆಯ ತೀವ್ರ ಕಷ್ಟಕ್ಕೆ ಸಿಲುಕಿದೆ. ಕಳೆದ 16 ವರ್ಷಗಳಲ್ಲಿ 13 ಬರಗಾಲಗಳನ್ನು ಕರ್ನಾಟಕ ಕಂಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರೀತ್ಯ ತಡೆದುಕೊಳ್ಳುವ ತಳಿಗಳ ಅಭಿವೃದ್ಧಿ, ಜಲಸಂರಕ್ಷಣೆ ಪದ್ಧತಿಗಳು, ಪಾರಂಪರಿಕ ಆಹಾರ ಸೇವನೆಯ ಉತ್ತೇಜನಾ ಕ್ರಮಗಳನ್ನು ರೂಪಿಸಲು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ತಜ್ಞರನ್ನು ನೀತಿ ಆಯೋಗ ಬಳಸಿಕೊಳ್ಳಬೇಕು.

ಆಶೋತ್ತರ ಜಿಲ್ಲೆಗಳೆಂದು ಕೇಂದ್ರ ಸರ್ಕಾರ ಗುರುತಿಸಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ವಿಸ್ತೃತ ಅಭಿವೃದ್ಧಿ ನಡೆಸಲು ಆಶೋತ್ತರ ಜಿಲ್ಲೆಗಳಿಗೆ ಪ್ರತಿ ವರ್ಷ ತಲಾ ₹100 ಕೋಟಿ ನೆರವು ನೀಡಬೇಕು ಎಂದು ಅವರು ಕೋರಿಕೊಂಡಿದ್ದಾರೆ.

ನೀತಿ ಆಯೋಗದ ಮುಂಬರುವ ಸಭೆಗಳ ಕಾರ್ಯಸೂಚಿಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಕೌಶಲ ಅಭಿವೃದ್ಧಿಯನ್ನೂ ಸೇರಿಸಬೇಕು. ಈ ದಿಸೆಯಲ್ಲಿ ನಾನಾ ರಾಜ್ಯಗಳು ಅನುಸರಿಸಿದ ವಿಧಾನಗಳು ಮತ್ತು ರಣತಂತ್ರಗಳನ್ನು ಪರಸ್ಪರ ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಎಂದು
ಹೇಳಿದ್ದಾರೆ.

Please follow and like us:
0
http://bp9news.com/wp-content/uploads/2018/06/ಕುಮಾರ್​-ಸ್ವಾಮಿ-1.jpghttp://bp9news.com/wp-content/uploads/2018/06/ಕುಮಾರ್​-ಸ್ವಾಮಿ-1-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯCM Komaraswamy appeals to Center for handing over green light What's doing is the center !!!ಬೆಂಗಳೂರು : ರೈತರ ಸಾಲ ಮನ್ನಾ ಮಾಡುವ ರಾಜ್ಯ ಸರ್ಕಾರದ ಕ್ರಮಕ್ಕೆ ಶೇ50ರಷ್ಟು ನೆರವು ನೀಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಪ್ರಧಾನಮಂತ್ರಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಉಲ್ಬಣಗೊಂಡಿರುವ ಕೃಷಿ ಬಿಕ್ಕಟ್ಟಿನ ನಿರ್ವಹಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈ ಜೋಡಿಸಬೇಕು. ರಾಜ್ಯದಲ್ಲಿ 85 ಲಕ್ಷ ರೈತರು ಬ್ಯಾಂಕುಗಳಿಂದ ಕೃಷಿ ಸಾಲ ಪಡೆದಿದ್ದಾರೆ. ಮತ್ತೆ ಮತ್ತೆ ಎರಗುವ ಬರಗಾಲ ಕಾರಣ ರೈತರ...Kannada News Portal