ಬೆಂಗಳುರು: ಬಹು ವಿವಾದಿತ ದತ್ತಪೀಠ ವಿವಾದ ಬಗ್ಗೆ ಸಮಿತಿ ವರದಿ ನೀಡಿದೆ. ಹೌದು ಈಗಂತಾ ಸ್ವತಃ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ. ಈ ಹಿಂದೆ ಸುಪ್ರೀಂಕೋರ್ಟ್ ದತ್ತಪೀಠ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಬೆನ್ನಲ್ಲೇ, ಸಮಗ್ರವಾದ ಮಾಹಿತಿಯನ್ನು ಕ್ರೂಢೀಕರಿಸಿ ವರದಿ ನೀಡಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ಪ್ರೊ.ರಮಹತ್ ತರೀಕೆರೆ ಸೇರಿದಂತೆ ಮೂರು ತಜ್ಞರ ಸಮಿತಿಯನ್ನು ರಚನೆ ಮಾಡಿ ವರದಿ ನೀಡಲು ಸರ್ಕಾರ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಈ ಸಮಿತಿಯ ವರದಿಯನ್ನು ಸಲ್ಲಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಗಹನಕ್ಕೆ ತಂದು ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಮಾಧ್ಯಮಗಳ ಮುಂದೆ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಆದರೆ ವರದಿಯಲ್ಲಿ ಏನು ತಿಳಿಸಲಾಗಿದೆ ಎಂಬ ಬಗ್ಗೆ ಮಾತ್ರ ಇನ್ನೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

Please follow and like us:
0
http://bp9news.com/wp-content/uploads/2018/01/datta-peetha-1.jpghttp://bp9news.com/wp-content/uploads/2018/01/datta-peetha-1-150x150.jpgPolitical Bureauಚಿಕ್ಕಮಗಳೂರುಪ್ರಮುಖರಾಜಕೀಯಬೆಂಗಳುರು: ಬಹು ವಿವಾದಿತ ದತ್ತಪೀಠ ವಿವಾದ ಬಗ್ಗೆ ಸಮಿತಿ ವರದಿ ನೀಡಿದೆ. ಹೌದು ಈಗಂತಾ ಸ್ವತಃ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ. ಈ ಹಿಂದೆ ಸುಪ್ರೀಂಕೋರ್ಟ್ ದತ್ತಪೀಠ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಬೆನ್ನಲ್ಲೇ, ಸಮಗ್ರವಾದ ಮಾಹಿತಿಯನ್ನು ಕ್ರೂಢೀಕರಿಸಿ ವರದಿ ನೀಡಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ಪ್ರೊ.ರಮಹತ್ ತರೀಕೆರೆ ಸೇರಿದಂತೆ ಮೂರು ತಜ್ಞರ ಸಮಿತಿಯನ್ನು ರಚನೆ ಮಾಡಿ ವರದಿ...Kannada News Portal