ಬೆಂಗಳೂರು : ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈವರೆಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಅವರು ಗೆದ್ದು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಈಗ ಈಶ್ವರಪ್ಪನವರಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರ ಹೆಸರು ಕೇಳಿಬಂದಿದೆಯಾದರೂ ಈವರೆಗೂ ಅಂತಿಮಗೊಂಡಿಲ್ಲ. ಹಿರಿತನವನ್ನೇ ಮಾನದಂಡವಾಗಿಟ್ಟುಕೊಂಡರೆ ಪರಿಷತ್​​ ನ ಪ್ರತಿಪಕ್ಷದ ಉಪನಾಯಕರಾಗಿದ್ದ ಕೆ.ಬಿ.ಶಾಣಪ್ಪಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಹಜವಾಗಿ ಒಲಿಯಬೇಕಿತ್ತು.

ಆದರೆ, ಆಡಳಿತ ಪಕ್ಷದ ವೈಫಲ್ಯಗಳನ್ನು ಸಮರ್ಥವಾಗಿ, ಎಳೆ ಎಳೆಯಾಗಿ ಸದನದಲ್ಲಿ ಬಿಡಿಸಿಡುವ ಚಾಕಚಕ್ಯತೆ ಶಾಣಪ್ಪನವರಿಗೆ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೆ, ಅವರಿಗೆ ಸಂವಹನದ ಕೊರತೆಯೂ ಇದೆ. ಹೀಗಾಗಿ ಈ ಸ್ಥಾನವನ್ನು ನಿಭಾಯಿಸುವಷ್ಟು ಸಾಮರ್ಥ್ಯ ಅವರಲ್ಲಿ ಕಂಡುಬರುತ್ತಿಲ್ಲ. ಅಲ್ಲದೆ, ಅವರ ಅಧಿಕಾರಾವಧಿ ಕೆಲವೇ ದಿನಗಳಲ್ಲಿ ಮುಗಿಯಲಿದೆ. ಇನ್ನು ಇತ್ತೀಚೆಗಷ್ಟೆ ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಆಯನೂರು ಮಂಜುನಾಥ್ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವಷ್ಟು ಸಾಮರ್ಥ್ಯವಿದೆ.

ಒಂದು ಬಾರಿ ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಪಕ್ಷದ ವಿವಿಧ ಜವಾಬ್ದಾರಿಯನ್ನು ಯಶಸ್ವಿಯಾಗಿಯೇ ನಿಭಾಯಿಸಿರುವ ಆಯನೂರು ಮಂಜುನಾಥ್​​ಗೆ ಈ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿಭಾಯಿಸಬಹುದು ಎಂಬ ಮಾತುಗಳು ಪಕ್ಷದಲ್ಲಿ ಕೇಳಿಬಂದಿವೆ. ಆದರೆ, ಈಗಾಗಲೇ ವಿಧಾನಸಭೆಯಲ್ಲಿ ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿರುವುದರಿಂದ ಮೇಲ್ಮನೆಯಲ್ಲೂ ಅದೇ ಸಮುದಾಯಕ್ಕೆ ಸೇರಿದವರನ್ನೇ ವಿರೋಧ ಪಕ್ಷದಲ್ಲಿ ಕೂರಿಸಿದರೆ ಕೆಟ್ಟ ಸಂದೇಶ ರವಾನೆಯಾಗಬಹುದು ಎಂಬ ಭೀತಿಯೂ ಎದುರಾಗಿದೆ.

ಇಬ್ಬರೂ ಒಂದೇ ಜಿಲ್ಲೆಗೆ ಸೇರಿರುವುದರಿಂದ ಆಯನೂರು ಮಂಜುನಾಥ್ ​​ಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹಿರಿಯರಾಗಿದ್ದ ಗಣೇಶ್ ಕಾರ್ನಿಕ್ ಪರಾಭವಗೊಂಡಿರುವುದು, ರಾಮಚಂದ್ರಗೌಡ, ವಿ.ಸೋಮಣ್ಣ, ಡಿ.ಎಸ್.ವೀರಯ್ಯ, ಬಿ.ಜೆ.ಪುಟ್ಟಸ್ವಾಮಿ ಪುನಃ ಸ್ಪರ್ಧೆಗೆ ಅವಕಾಶ ಇಲ್ಲದಿರುವುದರಿಂದ ಯಾರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂಬ ಜಿಜ್ಞಾಸೆ ಎದುರಾಗಿದೆ.

ಉಳಿದಂತೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಅರುಣ್ ಶಹಪುರ್ ಹೆಸರು ಕೇಳಿಬಂದಿದೆ. ಜತೆಗೆ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿರುವ ಇವರು ಸದನದಲ್ಲಿ ಯಾವುದೇ ವಿಷಯವನ್ನು ಎದೆಗಾರಿಕೆಯಿಂದ ಮಾತನಾಡುವ ಕೋಟಾ ಶ್ರೀನಿವಾಸ್ ಪೂಜಾರಿ ಹೆಸರು ಚಾಲ್ತಿಯಲ್ಲಿದೆ. ಒಂದು ವೇಳೆ ಕೋಟಾ ಶ್ರೀನಿವಾಸ್ ಪೂಜಾರಿಗೆ ಈ ಸ್ಥಾನ ಒಲಿದರೆ ವಿಧಾನ ಪರಿಷತ್​​ನ ಮುಖ್ಯ ಸಚೇತಕರಾಗಿ ಅರುಣ್ ಶಹಪುರ್ ಅವರನ್ನು ಆಯ್ಕೆ ಮಾಡುವ ಸಂಭವವಿದೆ. ಅಂತಿಮವಾಗಿ ಕೋಟಾ ಶ್ರೀನಿವಾಸ್ ಪೂಜಾರಿ, ಆಯನೂರು ಮಂಜುನಾಥ್ ಮತ್ತು ಅರುಣ್ ಶಹಪುರ್ ನಡುವೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸ್ಪರ್ಧೆ ಏರ್ಪಡಲಿದೆ.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗಬೇಕೆಂಬ ಸದುದ್ದೇಶ ಇಟ್ಟುಕೊಂಡರೆ ಶಹಪುರ್ ಗೆ ಸಿಗಬೇಕು. ಈ ಬಗ್ಗೆ ಸದ್ಯದಲ್ಲೇ ನಡೆಯಲಿರುವ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮುಖಂಡರೊಬ್ಬರಿಂದ ಬಿಪಿ9ಗೆ ಮಾಹಿತಿ ತಿಳಿದುಬಂದಿದೆ.

Please follow and like us:
0
http://bp9news.com/wp-content/uploads/2018/06/BJP-MELMANE-111.jpghttp://bp9news.com/wp-content/uploads/2018/06/BJP-MELMANE-111-150x150.jpgPolitical Bureauಪ್ರಮುಖರಾಜಕೀಯCompetition of the upper house in the BJP Opposition Leader Arun Shahpur OR Kota Srinivas Poojaryಬೆಂಗಳೂರು : ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈವರೆಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಅವರು ಗೆದ್ದು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈಗ ಈಶ್ವರಪ್ಪನವರಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರ ಹೆಸರು ಕೇಳಿಬಂದಿದೆಯಾದರೂ ಈವರೆಗೂ ಅಂತಿಮಗೊಂಡಿಲ್ಲ. ಹಿರಿತನವನ್ನೇ ಮಾನದಂಡವಾಗಿಟ್ಟುಕೊಂಡರೆ ಪರಿಷತ್​​ ನ ಪ್ರತಿಪಕ್ಷದ ಉಪನಾಯಕರಾಗಿದ್ದ...Kannada News Portal