ದಾವಣಗೆರೆ: ಬಿಜೆಪಿಯವರು ಹೇಳುವುದೊಂದು, ಮಾಡುವುದೊಂದು; ಇಂತಹ ಎರಡು ನಾಲಿಗೆಯ ಬಿಜೆಪಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಕೆಲಸವಿಲ್ಲ.  ಕಳೆದ ಬಾರಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಪಾಲಾಗಿದ್ದು, ಈ ಬಾರಿ ಎಲ್ಲಾ 8 ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ನಡೆದ ಜನಾಶೀರ್ವಾದ ಸಮಾವೇಶದಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅರ್ಧ ಗಂಟೆಯಲ್ಲೇ ಅನ್ನಭಾಗ್ಯ ಯೋಜನೆ ಜಾರಿಗೆ ತಂದ ತೃಪ್ತಿ ಇದೆ. ಈ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳುವ ಬಿಜೆಪಿಯವರು ನಾಚಿಕೆಯಾಗಬೇಕು. ಅನ್ನಭಾಗ್ಯಕ್ಕೆ ಅನುದಾನ ಒದಗಿಸುವ ಆಹಾರ ಭದ್ರತಾ ಕಾಯ್ದೆಯನ್ನು ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಹೊರತು ನರೇಂದ್ರ ಮೋದಿಯಲ್ಲ. ಇದು ಬಿಜೆಪಿ ಯೋಜನೆಯಾಗಿದ್ದರೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆ ಏಕಿಲ್ಲ? ಎಂದು ಅವರು ಪ್ರಶ್ನಿಸಿದರು.

ಕೆಜೆಪಿಯಲ್ಲಿದ್ದಾಗಿ ಇದೇ ಯಡಿಯೂರಪ್ಪ ಟಿಪ್ಪು ಕಿರೀಟ ಧರಿಸಿ, ಖಡ್ಗ ಹಿಡಿದು ಟಿಪ್ಪು ಸುಲ್ತಾನ್‍ರನ್ನು ಹಾಡಿ ಹೊಗಳಿದ್ದಾರೆ. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಶೇಕ್ ಅಲಿ ಬರೆದ ಪುಸ್ತಕದ ಮುನ್ನುಡಿಯಲ್ಲಿ ಟಿಪ್ಪುವನ್ನು ಹೊಗಳಿದ್ದಾರೆ. ನಾವು ಟಿಪ್ಪು ಜಯಂತಿ ಮಾಡಿದ್ದಕ್ಕೆ ವಿರೋಧಿಸುವ ಬಿಜೆಪಿಯವರದ್ದು ಎರಡು ನಾಲಿಗೆ. ಬರೀ ಟಿಪ್ಪು ಜಯಂತಿ ಮಾತ್ರವೇ ಆಚರಿಸಿಲ್ಲ. ಶ್ರೀಕೃಷ್ಣ, ಕೆಂಪೇಗೌಡ, ಕಿತ್ತೂರು ಚೆನ್ನಮ್ಮ, ಸಿದ್ಧರಾಮೇಶ್ವರ, ಅಂಬಿಗರ ಚೌಡಯ್ಯ, ದೇವರ ದಾಸಿಮಯ್ಯ, ಭಗೀರಥ ಹೀಗೆ ಅನೇಕ ಮಹಾತ್ಮರ ಜಯಂತಿಯನ್ನೂ ಆಚರಣೆಗೆ ತಂದಿದ್ದೇವೆ. ಬಿಜಾಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರು ನಾಮಕರಣ ಮಾಡಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಹಾಕಿಸಿದ್ದೇವೆ. ಬಿಜೆಪಿಯವರಿಗೆ ಅಧಿಕಾರದಲ್ಲಿದ್ದಾಗ ಇದನ್ನೆಲ್ಲಾ ಏಕೆ ಮಾಡಲು ಸಾಧ್ಯವಾಗಲಿಲ್ಲ? ಎಂದು ಅವರು ಹರಿಹಾಯ್ದರು.

ಕೆಲವರು ಬಾಯಲ್ಲಿ ಮಾತ್ರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಕೃತಿಯಲ್ಲಿ ಬೇರೇನನ್ನೋ ಮಾಡುತ್ತಾರೆ. ಕಾಂಗ್ರೆಸ್ ನಿಜಾರ್ಥದಲ್ಲಿ ಎಲ್ಲರನ್ನೂ ಒಳಗೊಳ್ಳುವ ಕಾರ್ಯಕ್ರಮ ನೀಡುತ್ತಿದೆ. ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಈವರೆಗೂ ನೋಡಿಲ್ಲ. ಇವರೇನು ಹಿಂದುತ್ವ ಗುತ್ತಿಗೆ ತೆಗೆದುಕೊಂಡಿದ್ದಾರಾ? ನಮಗೆ ಎಲ್ಲಾ ಧರ್ಮಗಳ ಬಗ್ಗೆ ಗೌರವವಿದೆ. ಆದರೆ ಅಸಹಿಷ್ಣುತೆ ದೇಶಕ್ಕೆ ಮಾರಕ. ಬಸವಣ್ಣ, ಅಂಬೇಡ್ಕರ್ ಕಂಡ ಸಮ ಸಮಾಜದ ಕನಸನ್ನು ನನಸು ಮಾಡುವ ಉದ್ದೇಶ ನಮ್ಮದು. ನಮ್ಮ ಲೆಕ್ಕ ಕೇಳೋಕೆ ಅಮಿತ್ ಶಾ ಯಾರು? ನಾನು ರಾಜ್ಯದ ಜನತೆಗೆ ಲೆಕ್ಕ ಕೊಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

Please follow and like us:
0
http://bp9news.com/wp-content/uploads/2018/03/WhatsApp-Image-2018-03-13-at-7.19.16-PM-1024x516.jpeghttp://bp9news.com/wp-content/uploads/2018/03/WhatsApp-Image-2018-03-13-at-7.19.16-PM-150x150.jpegBP9 Bureauದಾವಣಗೆರೆರಾಜಕೀಯದಾವಣಗೆರೆ: ಬಿಜೆಪಿಯವರು ಹೇಳುವುದೊಂದು, ಮಾಡುವುದೊಂದು; ಇಂತಹ ಎರಡು ನಾಲಿಗೆಯ ಬಿಜೆಪಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಕೆಲಸವಿಲ್ಲ.  ಕಳೆದ ಬಾರಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಪಾಲಾಗಿದ್ದು, ಈ ಬಾರಿ ಎಲ್ಲಾ 8 ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ನಗರದ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ನಡೆದ ಜನಾಶೀರ್ವಾದ ಸಮಾವೇಶದಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ...Kannada News Portal