ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ನಗರದ ಕೆ.ಬಿ ಬಡಾವಣೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶವಂತರಾವ್ ಜಾಧವ್ ಅವರು, ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದೆ. ಜನರ ಭಾವನೆಗಳಿಗೆ ರಾಜ್ಯಪಾಲರು ಸ್ಪಂದಿಸಿ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಸಲು ಆಮಂತ್ರಿಸಿರುವುದಕ್ಕೆ ತಾವು ಅಭಿನಂದಿಸುವುದಾಗಿ ಹೇಳಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಮುಂದಿನ ಹದಿನೈದು ದಿನಗಳಲ್ಲಿ ಬಹುಮತ ಸಾಭೀತು ಪಡಿಸಲಿದ್ದಾರೆ. ಬಹುಮತಕ್ಕೆ ಇನ್ನೂ 9 ಶಾಸಕರ ಅಗತ್ಯ ಇದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿನ ಶಾಸಕರು ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಹೇಳಿದ್ದು, ಯಡಿಯೂರಪ್ಪ ವಿಶ್ವಾಸ ಮತ ಪಡೆದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೇಮಂತಕುಮಾರ್, ರಾಜನಹಳ್ಳಿ ಶಿವಕುಮಾರ್, ಶಿವನಗೌಡ ಪಾಟೀಲ್, ರಮೇಶ್ ನಾಯಕ್, ಹೆಚ್.ಎನ್.ಶಿವಕುಮಾರ್, ಪಿ.ಸಿ.ಶ್ರೀನಿವಾಸ, ಜಯಮ್ಮ, ಜಯಲಕ್ಷ್ಮಮ್ಮ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Please follow and like us:
0
http://bp9news.com/wp-content/uploads/2018/05/dvg-1-bjp-vijayootsava-17518-script.and-photo-1.jpghttp://bp9news.com/wp-content/uploads/2018/05/dvg-1-bjp-vijayootsava-17518-script.and-photo-1-150x150.jpgBP9 Bureauದಾವಣಗೆರೆರಾಜಕೀಯದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ನಗರದ ಕೆ.ಬಿ ಬಡಾವಣೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶವಂತರಾವ್ ಜಾಧವ್ ಅವರು, ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದೆ. ಜನರ ಭಾವನೆಗಳಿಗೆ ರಾಜ್ಯಪಾಲರು...Kannada News Portal