ದಾವಣಗೆರೆ : ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ನಡೆಯುವ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜುಗೊಂಡಿದೆ. ಈ ಹಿನ್ನಲೆಯಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ನಾಳಿನ ಮತದಾನಕ್ಕಾಗಿ ನಿಯೋಜನೆಗೊಂಡಿರುವ ಸಿಬ್ಬಂದಿ ಇಂದು ಬೆಳಗ್ಗೆ ನಗರದ ಮೂರು ಸ್ಥಳಗಳಿಂದ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಸೇರಿದಂತೆ ಅಗತ್ಯವಾದ ಪರಿಕರಗಳೊಂದಿಗೆ ತೆರಳಿದರು.

ಶಾಂತಿಯುತ ಮತದಾನ ಸಂಬಂಧ ದಾವಣಗೆರೆ ಜಿಲ್ಲಾಡಳಿತ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ಕಾರ್ಯಕ್ಕಾಗಿ ಭದ್ರತಾ ಸಿಬ್ಬಂದಿಗಳು ಸೇರಿದಂತೆ 11.495 ಸಿಬ್ಬಂದಿಗಳು ನೇಮಕಗೊಂಡಿದ್ದಾರೆ. ಇಂದು ಬೆಳಗ್ಗೆ ದಾವಣಗೆರೆಯ ಡಿಆರ್‍ಆರ್ ಪಾಲಿಟೆಕ್ನಿಕ್ ಕಾಲೇಜು, ಯುಬಿಡಿಟಿ ಕಾಲೇಜು, ಮೋತಿ ವೀರಪ್ಪ, ಹೈಸ್ಕೂಲ್, ಆವರಣದಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಗಳನ್ನು ಪರೀಕ್ಷಿಸಿಕೊಂಡು ತಮಗೆ ನಿಗದಿಪಡಿಸಿರುವ ವಾಹನಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಮತಗಟ್ಟೆ ಅಧಿಕಾರಿಗಳೊಂದಿಗೆ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ತೆರಳಿದರು.

ಜಿಲ್ಲೆಯಲ್ಲಿ ಒಟ್ಟಾರೆ 1946 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟಾರೆ 16.32.949 ಮತದಾರರಿದ್ದಾರೆ. 591 ಕ್ಲಿಷ್ಟಕರ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಈ ಬಾರಿ ವಿಶೇಷವಾಗಿ ಮಹಿಳೆಯರೇ ನಿರ್ವಹಿಸಿರುವ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಮಾರು 15 ಪಿಂಕ್ ಮತಗಟ್ಟೆಗಳು ಕಾರ್ಯನಿರ್ವಹಿಸಲಿವೆ. ಮತಗಟ್ಟೆಗೆ ತೆರಳಲು ಸಿಬ್ಬಂದಿಗೆ 458 ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಇನ್ನು ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

 

Please follow and like us:
0
http://bp9news.com/wp-content/uploads/2018/05/dvg-3-nale-chunavane-11518-script.and-photo.3.jpghttp://bp9news.com/wp-content/uploads/2018/05/dvg-3-nale-chunavane-11518-script.and-photo.3-150x150.jpgBP9 Bureauದಾವಣಗೆರೆರಾಜಕೀಯದಾವಣಗೆರೆ : ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ನಡೆಯುವ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜುಗೊಂಡಿದೆ. ಈ ಹಿನ್ನಲೆಯಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ನಾಳಿನ ಮತದಾನಕ್ಕಾಗಿ ನಿಯೋಜನೆಗೊಂಡಿರುವ ಸಿಬ್ಬಂದಿ ಇಂದು ಬೆಳಗ್ಗೆ ನಗರದ ಮೂರು ಸ್ಥಳಗಳಿಂದ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಸೇರಿದಂತೆ ಅಗತ್ಯವಾದ ಪರಿಕರಗಳೊಂದಿಗೆ ತೆರಳಿದರು. ಶಾಂತಿಯುತ ಮತದಾನ ಸಂಬಂಧ ದಾವಣಗೆರೆ ಜಿಲ್ಲಾಡಳಿತ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ಕಾರ್ಯಕ್ಕಾಗಿ ಭದ್ರತಾ...Kannada News Portal