ದಾವಣಗೆರೆ : ಲಿಂಗಾಯತ ಸ್ವತಂತ್ರ ಧರ್ಮ ಬೇಡಿಕೆ ಅನುಮೋದಿಸಲು ಹೊರಟಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ದಾವಣಗೆರೆ ಜಿಲ್ಲೆಯ ವೀರಶೈವ ಲಿಂಗಾಯತ ಪ್ರಮುಖ ಮಠಾಧೀಶರುಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದ ಆವರಣದಿಂದ ಮೆರವಣಿಗೆ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಲಿಂಗಾಯತ ಸ್ವತಂತ್ರ ಧರ್ಮ ಬೇಡಿಕೆ ಆಧರಿಸಿ ಕರ್ನಾಟಕ ಸರ್ಕಾರ ನಿಯಮಿಸಿದ್ದ ನ್ಯಾ, ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿರುವ ವರದಿ ಏಕಪಕ್ಷೀಯವಾಗಿದೆ. ಇದನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಹೊರಟಿರುವುದು ಸರ್ಕಾರದ ತರಾತುರಿ ನಿಲುವಾಗಿದೆ ಎಂದು ಪ್ರತಿಭಟನಾ ನಿರತರು ಖಂಡನೆ ವ್ಯಕ್ತಪಡಿಸಿದರು.

ಈ ವೇಳೆ ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, 5 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ವೀರಶೈವ ಲಿಂಗಾಯತ ಧರ್ಮವನ್ನು ಸರ್ಕಾರ ಯಾವುದೇ ಕಾರಣಕ್ಕೂ ಒಡೆಯಬಾರದು. ವೀರಶೈವ-ಲಿಂಗಾಯತ ಒಂದೇ ಎಂಬ ಭಾವನೆಯನ್ನು ಭಕ್ತರು ಹೊಂದಿದ್ದಾರೆ. ಕೆಲವು ಮಠಾಧೀಶರ ಒತ್ತಾಯಕ್ಕೆ ಮಣಿದು ಸರ್ಕಾರ ನ್ಯಾ,ನಾಗಮೋಹನ್ ದಾಸ್ ವರದಿ ಅಂಗೀಕರಿಸಿ ಒಂದಾಗಿರುವ ಸಮಾಜವನ್ನು ಒಡೆಯಲು ಹೊರಟಿದೆ. ಯಾವುದೇ ಕಾರಣಕ್ಕೂ ವರದಿ ಅಂಗೀಕರಿಸಬಾರದು ಹಾಗೂ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು. ಒಂದು ವೇಳೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ಮುಂದಾಗುವ ಘಟನೆಗಳಿಗೆ ಸರ್ಕಾರವೇ ನೇರ ಕಾರಣವಾಗಲಿದೆ ಎಂದರು.

ಪ್ರತಿಭಟನೆಯಲ್ಲಿ ಕಂಬಾಳಿ ಮಠದ ಶ್ರೀ, ಕಿರುವಾಡಿ ಸೋಮಶೇಖರ್, ವಾಗೀಶಯ್ಯ, ಅಜ್ಜಂಪುರ ಮುತ್ತಣ್ಣ, ಮುರುಗೇಶ್, ಪರಮೇಶ್ವರಯ್ಯ, ಜಿ.ಎಂ.ಹಾಲಸ್ವಾಮಿ, ಆರ್.ಟಿ.ಪ್ರಶಾಂತ್, ವೀರಯ್ಯ, ಹೊನ್ನಯ್ಯ, ಪರಮೇಶ್ವರಯ್ಯ, ಆರ್.ಎಸ್.ತಿಪ್ಪೇಸ್ವಾಮಿ, ಜಗದೀಶ್, ಶಕುಂತಲಾ ಗುರುಸಿದ್ದಯ್ಯ, ದತ್ತಾತ್ರೇಯ ಮತ್ತಿತರರಿದ್ದರು.

Please follow and like us:
0
http://bp9news.com/wp-content/uploads/2018/03/WhatsApp-Image-2018-03-14-at-4.13.37-PM.jpeghttp://bp9news.com/wp-content/uploads/2018/03/WhatsApp-Image-2018-03-14-at-4.13.37-PM-150x150.jpegBP9 Bureauದಾವಣಗೆರೆ ದಾವಣಗೆರೆ : ಲಿಂಗಾಯತ ಸ್ವತಂತ್ರ ಧರ್ಮ ಬೇಡಿಕೆ ಅನುಮೋದಿಸಲು ಹೊರಟಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ದಾವಣಗೆರೆ ಜಿಲ್ಲೆಯ ವೀರಶೈವ ಲಿಂಗಾಯತ ಪ್ರಮುಖ ಮಠಾಧೀಶರುಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದ ಆವರಣದಿಂದ ಮೆರವಣಿಗೆ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಲಿಂಗಾಯತ ಸ್ವತಂತ್ರ...Kannada News Portal