ದಾವಣಗೆರೆ : ರಫೆಲ್ ಯದ್ದ ವಿಮಾನ ಖರೀದಿ ಹಗರಣದ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಯದೇವ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸುಳ್ಳುಗಳ ಮೂಲಕವೇ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ಬಗ್ಗೆ ದೇಶದ ಜನರ ಈಗಾಗಲೇ ಬೇಸತ್ತಿದ್ದು. ಬದಲಾವಣೆ ಬಯಸುತ್ತಿದ್ದಾರೆ ಎಂದರು.

ರಾಜ್ಯದಲ್ಲೂ ಕೂಡ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ.ಈ ಕೆಲಸ ಯಾರಿದಂಲೂ ಸಾಧ್ಯವಿಲ್ಲ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಕೂಡ ಅವಕಾಶ ಮಾಡಿಕೊಡುವುದಿಲ್ಲ ಎಂದರು.  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಚುನಾವಣಾ ಪೂರ್ವದಲ್ಲಿ ನೀಡಿದ್ದ ಯಾವ ಭರವಸೆಗಳನ್ನೂ ಮೋದಿ ಸರ್ಕಾರ ಈಡೇರಿಸಿಲ್ಲ. ಇಂತಹ ಸರ್ಕಾರವನ್ನು ಮನೆಗೆ ಕಳುಹಿಸುವ ದಿನಗಳು ದೂರವಿಲ್ಲ. ಇದಕ್ಕಾಗಿ ದೇಶಾದ್ಯಂತ ಕಾಂಗ್ರೆಸ್ ಬೃಹತ್ ಹೋರಾಟ ಆರಂಭಿಸಿದೆ ಎಂದರು.

ಪಾಲಿಕೆ ಸದಸ್ಯ ದಿನೇಶ್ ಕೆ.ಶೆಟ್ಟಿ. ಸೈಯದ್ ಸೈಫುಲ್ಲಾ,ಎ.ನಾಗರಾಜ್ ಸೇರಿದಂತೆ ಅನೇಕರು ಮಾತನಾಡಿದರು. ಶಾಸಕ ಅಬ್ದುಲ್ ಜಬ್ಭಾರ್, ಮೇಯರ್ ಶೋಭಾ ಪಲ್ಲಾಗಟ್ಟೆ,ಅಯುಬ್ ಪೈಲ್ವಾನ್,ಉಪಮೇಯರ್ ಚಮನ್ ಸಾಬ್ ಸೇರಿದಂತೆ ನೂರಕ್ಕೂ ಅಧಿಕ ಕಾರ್ಯಕರ್ತರು ,ಮುಖಂಡರು ಭಾಗವಹಿಸಿದ್ದರು.

 

Please follow and like us:
0
http://bp9news.com/wp-content/uploads/2018/09/dvg-2-protest-15918-script.and-photo-1.jpghttp://bp9news.com/wp-content/uploads/2018/09/dvg-2-protest-15918-script.and-photo-1-150x150.jpgBP9 Bureauದಾವಣಗೆರೆಪ್ರಮುಖರಾಜಕೀಯದಾವಣಗೆರೆ : ರಫೆಲ್ ಯದ್ದ ವಿಮಾನ ಖರೀದಿ ಹಗರಣದ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಯದೇವ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸುಳ್ಳುಗಳ ಮೂಲಕವೇ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ಬಗ್ಗೆ ದೇಶದ ಜನರ ಈಗಾಗಲೇ ಬೇಸತ್ತಿದ್ದು. ಬದಲಾವಣೆ ಬಯಸುತ್ತಿದ್ದಾರೆ ಎಂದರು. var domain = (window.location != window.parent.location)? document.referrer : document.location.href; if(domain==''){domain...Kannada News Portal