ದಾವಣಗೆರೆ : ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ. ಈ ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಗ್ರಾ.ಪಂ ಸದಸ್ಯರೊಂದಿಗೆ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಇಂಡಿಯಾ ಎಗೆನೆಸ್ಟ್ ಕರಪ್ಷನ್ ಜಿಲ್ಲಾ ಸಂಚಾಲಕ ಡಾ.ಮಧುಕರ ಸಣ್ಣತಮ್ಮಣ್ಣ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಲ್ಲೇದೇವರಪುರ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸು, ಬಿಆರ್ ಜಿ ಎಫ್, ಉದ್ಯೋಗಖಾತ್ರಿ ಹಾಗೂ ಕಂದಾಯ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ. ಇದರ ವಿರುದ್ದ ಗ್ರಾ.ಪಂ ಸದಸ್ಯರು ಜಿ.ಪಂ ಸಿಇಓಗೆ ದಾಖಲೆ ಸಹಿತ ದೂರು ನೀಡಿದ್ದಾರೆ. ಅದರಂತೆ ಸಿಇಓ ಅವರು, ವಿವಿಧ ತನಿಖಾ ತಂಡಗಳನ್ನು ರಚಿಸಿದ್ದರು. ಇದರನ್ವಯ ಕಳೆದ ಮಾರ್ಚ್ 24 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೂ ಸಹ ವರದಿ ನೀಡಿದ್ದಾರೆ.

ಕಲ್ಲೇದೇವರಪುರ ಗ್ರಾ.ಪಂ ನಲ್ಲಿ ಸುಮಾರು 80 ಲಕ್ಷ ರೂ ನಷ್ಟು ಅವ್ಯವಹಾರ ನಡೆದಿದೆ. ಈ ಅವ್ಯವಹಾರದಲ್ಲಿ ಪಿಡಿಓ ಹಾಗೂ ಗ್ರಾ.ಪಂ ಅಧ್ಯಕ್ಷೆ ಭಾಗಿಯಾಗಿದ್ದಾರೆ. ಇವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ವರದಿ ಕಳುಹಿಸಲಾಗಿದೆ. ಈ ಬಗ್ಗೆ ಗ್ರಾ.ಪಂ ನ 9 ಸದಸ್ಯರು ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದರು ಸಹ ಕ್ರಮಕೈಗೊಂಡಿಲ್ಲ. ಪ್ರಕರಣ ದಾಖಲಿಸಿಲ್ಲ. ಆದ್ದರಿಂದ 8 ದಿನಗಳೊಳಗಾಗಿ ಗ್ರಾ.ಪಂ ಅಧ್ಯಕ್ಷೆ ಹಾಗೂ ಪಿಡಿಓ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ ಕಲ್ಲೇದೇವರಪುರ ಗ್ರಾ.ಪಂ ಸದಸ್ಯರೊಂದಿಗೆ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ ಸದಸ್ಯರಾದ ನಾಗಲಿಂಗಪ್ಪ, ಮಹಾಂತೇಶ್ ಇದ್ದರು.

 

Please follow and like us:
0
http://bp9news.com/wp-content/uploads/2018/06/dvg-2-avyavahara-13618-script-and-photo-1.jpghttp://bp9news.com/wp-content/uploads/2018/06/dvg-2-avyavahara-13618-script-and-photo-1-150x150.jpgBP9 Bureauದಾವಣಗೆರೆದಾವಣಗೆರೆ : ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ. ಈ ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಗ್ರಾ.ಪಂ ಸದಸ್ಯರೊಂದಿಗೆ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಇಂಡಿಯಾ ಎಗೆನೆಸ್ಟ್ ಕರಪ್ಷನ್ ಜಿಲ್ಲಾ ಸಂಚಾಲಕ ಡಾ.ಮಧುಕರ ಸಣ್ಣತಮ್ಮಣ್ಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಲ್ಲೇದೇವರಪುರ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸು, ಬಿಆರ್ ಜಿ ಎಫ್, ಉದ್ಯೋಗಖಾತ್ರಿ ಹಾಗೂ ಕಂದಾಯ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ....Kannada News Portal