ಬೆಂಗಳೂರು:ಪತ್ರಕರ್ತೆ, ಪ್ರಗತಿಪರ ಚಿಂತಕಿ, ಸಾಹಿತಿ ಗೌರಿ ಲಂಕೇಶ ಅವರ ಹತ್ಯೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ಖಂಡಿಸಿದೆ.​

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ABVP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್​​ ಬಿದರೆ,ಪತ್ರಕರ್ತೆ ಗೌರಿ ಲಂಕೇಶ್​​ ಅವರ ಹತ್ಯೆ ಮಾನವೀಯ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದೆ ಇದನ್ನು ABVP ತ್ರೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.ಗೌರಿ ಲಂಕೇಶ್​​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಸಾವಿನ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಈ ರೀತಿಯ ಹತ್ಯೆಗಳು ನಡೆಯುತ್ತಿದ್ದು ಸರ್ಕಾರ ಹತ್ಯೆಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.ಗೌರಿ ಲಂಕೇಶ್​​ ಸೇರಿ ಈ ಹಿಂದೆ ನಡೆದ ಹತ್ಯೆಗಳ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ABVP ಆಗ್ರಹಿಸಿದೆ.

 

Please follow and like us:
0
http://bp9news.com/wp-content/uploads/2017/09/download-3.jpghttp://bp9news.com/wp-content/uploads/2017/09/download-3-150x150.jpgBP9 Bureauಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಬೆಂಗಳೂರುಬೆಂಗಳೂರು:ಪತ್ರಕರ್ತೆ, ಪ್ರಗತಿಪರ ಚಿಂತಕಿ, ಸಾಹಿತಿ ಗೌರಿ ಲಂಕೇಶ ಅವರ ಹತ್ಯೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ಖಂಡಿಸಿದೆ.​ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ABVP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್​​ ಬಿದರೆ,ಪತ್ರಕರ್ತೆ ಗೌರಿ ಲಂಕೇಶ್​​ ಅವರ ಹತ್ಯೆ ಮಾನವೀಯ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದೆ ಇದನ್ನು ABVP ತ್ರೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.ಗೌರಿ ಲಂಕೇಶ್​​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಸಾವಿನ ನೋವನ್ನು ಭರಿಸುವ ಶಕ್ತಿ ಅವರ...Kannada News Portal