ಗದಗ : ಶಿಕ್ಷಕರ ಕೊರತೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಶ್ರೀಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆನಲ್ಲಿ ನಡೆದಿದೆ.

ಬಾಲೆಹೊಸೂರ ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ 8, 9 ಹಾಗೂ 10 ನೇ ತರಗತಿಗೆ ಒಬ್ಬರೇ ಶಿಕ್ಷಕರು ಇದ್ದಾರೆ. ಮಕ್ಕಳ ಭವಿಷ್ಯದ ಜೊತೆ ಶಿಕ್ಷಣ ಇಲಾಖೆಯ ಚೆಲ್ಲಾಟ ಆಡುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದಕ್ಕೆ ಸ್ಥಳೀಯರು ಸಾಥ್ ನೀಡಿ ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


220 ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕರಿದ್ದು, ಕನ್ನಡ, ಗಣಿತ, ವಿಜ್ಞಾನ, ಸಮಾಜ, ಹಿಂದಿ ವಿಷಯ ಶಿಕ್ಷಕರ ಕೊರತೆ ಇರುವ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದರು. ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಹಿನ್ನೆಲೆ ಪ್ರಸಕ್ತ ವರ್ಷ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸ್ಥಳಿಯರು ಆರೋಪಿಸಿದರು. ಶೀಘ್ರದಲ್ಲೇ ಶಿಕ್ಷಕರನ್ನ ಭರ್ತಿ ಮಾಡದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.


Please follow and like us:
0
http://bp9news.com/wp-content/uploads/2018/06/Karnatakada-Miditha-10.jpeghttp://bp9news.com/wp-content/uploads/2018/06/Karnatakada-Miditha-10-150x150.jpegBP9 Bureauಗದಗಗದಗ : ಶಿಕ್ಷಕರ ಕೊರತೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಶ್ರೀಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆನಲ್ಲಿ ನಡೆದಿದೆ. ಬಾಲೆಹೊಸೂರ ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ 8, 9 ಹಾಗೂ 10 ನೇ ತರಗತಿಗೆ ಒಬ್ಬರೇ ಶಿಕ್ಷಕರು ಇದ್ದಾರೆ. ಮಕ್ಕಳ ಭವಿಷ್ಯದ ಜೊತೆ ಶಿಕ್ಷಣ ಇಲಾಖೆಯ ಚೆಲ್ಲಾಟ ಆಡುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ...Kannada News Portal