ಗದಗ : ಜಿಲ್ಲೆಯಲ್ಲಿ ಕಪ್ಪತ್ತಗುಡ್ಡ ಕಬಳಿಸಲು ಮುಂದಾದವರು ಬಿಜೆಪಿಯವರು ಎಂಬ ಸತ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲವೆ ಎಂದು ಸಚಿವ ಎಚ್.ಕೆ. ಪಾಟೀಲ್ ಪ್ರಶ್ನಿಸಿದ್ದಾರೆ.

ಕಪ್ಪತ್ತಗುಡ್ಡ ಸಂರಕ್ಷಣೆ ವಿಚಾರವಾಗಿ ಗದಗನಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಪ್ಪತ್ತಗುಡ್ಡ ಕಬಳಿಕೆಗೆ ಬಿಜೆಪಿಗರು ಮುಂದಾಗಿದ್ದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಡಾ. ತೋಂಟದ ಸಿದ್ದಲಿಂಗ ಶ್ರೀಗಳು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಈ ಹಿನ್ನೆಲೆಯಲ್ಲಿ ಕಪ್ಪತ್ತಗುಡ್ಡ ಕಬಳಿಸಲು ಸಾಧ್ಯವಾಗಲಿಲ್ಲ. ಹಿಗಾಗಿ ಅವರು ಹತಾಶೆ ಭಾವನೆಯಿಂದ ಹೀಗೆ ಮಾತನಾಡುತ್ತಿದ್ದಾರೆ. ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ಹೋರಾಟ ಮಾಡಿದವರು ಯಾರು ಅಂತ ಎಲ್ಲರಿಗೂ ಗೊತ್ತಿದೆ. ಆದರೆ ಪ್ರಧಾನಿಗೆ ಮಾತ್ರ ಇದ್ಯಾವುದು ಗೊತ್ತಿಲ್ಲವೇ? ಎಂದು ಕೇಳಿದ್ದಾರೆ.

ಕಪ್ಪತ್ತಗುಡ್ಡ ಸಂರಕ್ಷಣೆ ವಿಚಾರವಾಗಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹದಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ಸಿಗರು ಅಭಿಪ್ರಾಯ ತಿಳಿಸಿದ್ದಾರೆ. ಆದರೆ ನಿಮ್ಮ ಬಿಜೆಪಿಯ ಜಗದೀಶ್ ಶೆಟ್ಟರ್ ಹಾಗೂ ಈಗ ಚುನಾವಣಾ ಕಣದಲ್ಲಿರೋ ಯಾವೊಬ್ಬ ಅಭ್ಯರ್ಥಿಗಳು ಬಂದಿರಲಿಲ್ಲ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟದ ಬಗ್ಗೆ ಸುಳ್ಳು ಹೇಳುತ್ತಿರುವುದು ಸರಿಯಲ್ಲ. ಕಪ್ಪತ್ತಗುಡ್ಡದ ಸಂರಕ್ಷಣೆಗಾಗಿ ನಿಮ್ಮ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ನಡೆದ್ವೋ ಅಥವಾ ಮಠದಲ್ಲಿ ನಡೆದ್ವೋ? ಎಂದು ಪ್ರಶ್ನಿಸಿದರು.

ಕಪ್ಪತ್ತಗುಡ್ಡದಲ್ಲಿ 20-2-2008 ರಲ್ಲೆ ಗಣಿಗಾರಿಕೆಗೆ ಸರ್ಕಾರದ ಆದೇಶ ಹೊರಡಿಸಿತ್ತು. 23-09-2009 ರಂದು ರಾಮಘಡ ಮಿನರಲ್ಸ್ ಜೊತೆ ಒಪ್ಪಂದ ಮಾಡಿಕೊಂಡ ಸಂದರ್ಭದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿತ್ತು. ಅಲ್ಲದೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲೆ ಕಪ್ಪತ್ತಗುಡ್ಡವನ್ನು ಗುತ್ತಿಗೆಗೆ ಕೊಡಲಾಗಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿರುವುದರಿಂದ ಬಿಜೆಪಿಗರ ಹುಸಿ ಮಾತುಗಳು ಸಾರ್ವಜನಿಕವಾಗಿ ಬಹಿರಂಗವಾಗುತ್ತಿವೆ ಎಂದರು.

ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಚ್.ಕೆ. ಪಾಟೀಲ್,  ಪ್ರಜಾಪ್ರಭುತ್ವ ಎಂದರೆ ಹಿಟ್ ಆಂಡ್ ರನ್ನ ಅಲ್ಲ. ಹೀಗಾಗಿ ನಿಮಗೆ ಪ್ರಾರ್ಥನೆ ಮಾಡ್ತಿನಿ. ಜತೆಗೆ ನಿವು ಪ್ರಜ್ಞಾವಂತರ ನಾಡಲ್ಲಿ ನಿಂತು ಹಸಿ ಸುಳ್ಳು ಹೇಳಿದ್ದೀರಿ ಇದಕ್ಕಾಗಿ ಪ್ರಧಾನಿಗಳು ಈ ಕೂಡಲೆ ನಾಡಿನ ಜನರಿಗೆ ಕ್ಷಮೆ ಕೇಳಬೇಕು. ರಾಜ್ಯದ ಜನರಿಗೆ ತಪ್ಪು ಮಾಹಿತಿ ನೀಡೋ ಮೂಲಕ ಪ್ರಧಾನಿ ಚುನಾವಣಾ ಅಕ್ರಮವೆಸಗಿದ್ದಾರೆ. ಆದರೆ ಸುಳ್ಳು ಹೇಳುವ ಪ್ರವೃತ್ತಿ ರಾಷ್ಟ್ರದ ಪ್ರಧಾನಿಗೆ ಬಂದಿರೋದು ದುರದೃಷ್ಟಕರ ಸಂಗತಿ. ಈ ಬಗ್ಗೆ ಚುನಾವಣಾ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Please follow and like us:
0
http://bp9news.com/wp-content/uploads/2018/05/Karnatakada-Miditha-17.jpeghttp://bp9news.com/wp-content/uploads/2018/05/Karnatakada-Miditha-17-150x150.jpegBP9 Bureauಗದಗರಾಜಕೀಯಗದಗ : ಜಿಲ್ಲೆಯಲ್ಲಿ ಕಪ್ಪತ್ತಗುಡ್ಡ ಕಬಳಿಸಲು ಮುಂದಾದವರು ಬಿಜೆಪಿಯವರು ಎಂಬ ಸತ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲವೆ ಎಂದು ಸಚಿವ ಎಚ್.ಕೆ. ಪಾಟೀಲ್ ಪ್ರಶ್ನಿಸಿದ್ದಾರೆ. ಕಪ್ಪತ್ತಗುಡ್ಡ ಸಂರಕ್ಷಣೆ ವಿಚಾರವಾಗಿ ಗದಗನಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಪ್ಪತ್ತಗುಡ್ಡ ಕಬಳಿಕೆಗೆ ಬಿಜೆಪಿಗರು ಮುಂದಾಗಿದ್ದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಡಾ. ತೋಂಟದ ಸಿದ್ದಲಿಂಗ ಶ್ರೀಗಳು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಈ ಹಿನ್ನೆಲೆಯಲ್ಲಿ...Kannada News Portal