ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಕಾಂಗ್ರೆಸ್‌ನಿಂದ ಶಾಸಕರಾಗಿರುವ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಧಾರವಾಡ ಜಿಲ್ಲಾ ಅಹಿಂದ ಸಂಘಟನೆಗಳ ಒಕ್ಕೂಟ ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಛಲವಾದಿ ಯುವ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಅಂಬೇಡ್ಕರ್‌ ವೃತ್ತದ ಬಳಿ ಭಾನುವಾರ ಸೇರಿದ ಅಹಿಂದ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಅಬ್ಬಯ್ಯ ಅವರ ಪರ ಘೋಷಣೆ ಕೂಗಿ ‘ಮೊದಲ ಸಲ ಶಾಸಕರಾಗಿ ಆಯ್ಕೆಯಾದಾಗ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಾಕಷ್ಟು ಅನುದಾನ ತಂದುಕೊಟ್ಟಿದ್ದಾರೆ. ಮೀಸಲು ಕ್ಷೇತ್ರದಿಂದ ಗೆದ್ದಿರುವ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಪ್ರಭು ಪ್ರಭಾಕರ, ರಜತ್‌ ಉಳ್ಳಾಗಡ್ಡಿಮಠ, ಯಮನೂರ ಜಾಧವ, ಮೆಹಮೂದ್‌ ಕೌಲೂರು, ಸುನೀಲ ಮರಾಠೆ, ಕಾಶಿ ಕೋಡೆ, ಶಿವ ಬೆಂಡಿಗೇರಿ, ಕಾಲು ಸಿಂಗ್‌, ಗಫಾರ್‌ ಮಣಿಯಾರ, ರಾಜೀವ ಲದ್ವಾ, ಬಸವರಾಜ ಮೆಣಸಗಿ, ಮಾರುತಿ ದೊಡ್ಡಮನಿ, ಪ್ರಸನ್ನ ಮಿರಜಕರ ಉಪಸ್ಥಿತರಿದ್ದರು.

 

Please follow and like us:
0
http://bp9news.com/wp-content/uploads/2018/05/prasadabbayya_MLA.jpghttp://bp9news.com/wp-content/uploads/2018/05/prasadabbayya_MLA-150x150.jpgBP9 Bureauರಾಜಕೀಯಹುಬ್ಬಳ್ಳಿ-ಧಾರವಾಡಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಕಾಂಗ್ರೆಸ್‌ನಿಂದ ಶಾಸಕರಾಗಿರುವ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಧಾರವಾಡ ಜಿಲ್ಲಾ ಅಹಿಂದ ಸಂಘಟನೆಗಳ ಒಕ್ಕೂಟ ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಛಲವಾದಿ ಯುವ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಅಂಬೇಡ್ಕರ್‌ ವೃತ್ತದ ಬಳಿ ಭಾನುವಾರ ಸೇರಿದ ಅಹಿಂದ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಅಬ್ಬಯ್ಯ ಅವರ ಪರ ಘೋಷಣೆ ಕೂಗಿ ‘ಮೊದಲ ಸಲ ಶಾಸಕರಾಗಿ ಆಯ್ಕೆಯಾದಾಗ ಅವರು ಕ್ಷೇತ್ರದ...Kannada News Portal