ಬೆಂಗಳೂರು: ಬಿಜೆಪಿಯೊಂದಿಗೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್​.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಕ್ಕೆ ತಮ್ಮ ತಂದೆ ದೇವೇಗೌಡರು ನೀಡಿರುವ ಸಂದರ್ಶನದಲ್ಲಿ, ತನ್ನ ಮಾತನ್ನು ಮೀರಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾದರೆ ಅವರನ್ನು ನಾವು ನಮ್ಮ ಕುಟುಂಬದಿಂದ ಬಹಿಷ್ಕರಿಸುವುದಾಗಿ​ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಎಚ್​.ಡಿ.ದೇವೇಗೌಡರು ಆ ಹೇಳಿಕೆಯನ್ನು ಯಾವ ಸಂದರ್ಭದಲ್ಲಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ,  ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡೋ‌ ಪ್ರಶ್ನೆ ಉದ್ಭವಿಸದು .ಈ ಬಾರಿ 113 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಸ್ವಂತ ಬಲದ ಮೇಲೆ ನಾವು ಸರ್ಕಾರ ರಚಿಸುತ್ತೇವೆ. ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ನಾಡಿನ ಜನ ಜೆಡಿಎಸ್ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವ್ಯಕ್ತಪಡಿಸಿದರು.

ಜೆಡಿಎಸ್‌ ಬಗ್ಗೆ ಮಾತನಾಡಲು ಸಿಎಂಗೆ ವಿಷಯವಿಲ್ಲ. ಹಾಗಾಗಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಕಿಡಿಕಾರಿದರು. ನಾನು ಅಮಿತ್ ಷಾ ಜೊತೆ ವಿಮಾನಯಾನ ಮಾಡಿದ್ದೇನೆ ಎಂಬ ಸಿಎಂ‌ ಆರೋಪಕ್ಕೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಾಬೀತು ಪಡಿಸುವಂತೆ ಸಿಎಂಗೆ ಸವಾಲು ಹಾಕಿದ್ದಾರೆ.

 

 

Please follow and like us:
0
http://bp9news.com/wp-content/uploads/2018/04/HD-Kumarswamy-Karnatakada-Miditha.jpeghttp://bp9news.com/wp-content/uploads/2018/04/HD-Kumarswamy-Karnatakada-Miditha-150x150.jpegBP9 News Bureauಪ್ರಮುಖಹಾಸನ  ಬೆಂಗಳೂರು: ಬಿಜೆಪಿಯೊಂದಿಗೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್​.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಕ್ಕೆ ತಮ್ಮ ತಂದೆ ದೇವೇಗೌಡರು ನೀಡಿರುವ ಸಂದರ್ಶನದಲ್ಲಿ, ತನ್ನ ಮಾತನ್ನು ಮೀರಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾದರೆ ಅವರನ್ನು ನಾವು ನಮ್ಮ ಕುಟುಂಬದಿಂದ ಬಹಿಷ್ಕರಿಸುವುದಾಗಿ​ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಎಚ್​.ಡಿ.ದೇವೇಗೌಡರು ಆ ಹೇಳಿಕೆಯನ್ನು ಯಾವ ಸಂದರ್ಭದಲ್ಲಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ,  ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡೋ‌ ಪ್ರಶ್ನೆ...Kannada News Portal