ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೪೦ವರ್ಷಗಳಿಂದ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಕಾಂಗ್ರೆಸ್‌ನ ಮನೋಹರ ತಹಶೀಲ್ದಾರ, ಬಿಜೆಪಿಯ ಸಿ.ಎಂ.ಉದಾಸಿ ಅವರ ಮಧ್ಯ ನಡೆಯುತ್ತಿದ್ದ ಹಣಾ-ಹಣಿ ಪ್ರಸಕ್ತ ಚುನಾವಣೆಯಲ್ಲಿ ಕಂಡು ಬರುತ್ತಿಲ್ಲ. ಕಾರಣ ಕಾಂಗ್ರೆಸ್ ಅಭ್ಯರ್ಥಿ ಬದಲಾಗಿದ್ದಾರೆ. ತಹಶೀಲ್ದಾರ ಬದಲು ವಿಧಾನ ಪರಿಷತ್​​ ಸದಸ್ಯ ಶ್ರೀನಿವಾಸ ಮಾನೆ ಕಣದಲ್ಲಿದ್ದಾರೆ. ಬಿಜೆಪಿ ಯಿಂದ ಮಾಜಿ ಸಚಿವ ಸಿ.ಎಂ.ಉದಾಸಿ ಕಣದಲ್ಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ , ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ.

ಹಾನಗಲ್ಲ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಸ್ಪರ್ಧೆಗೆ ಕೈ ಕಾರ್ಯಕರ್ತರು ಹಾಗೂ ಮುಖಂಡರಲ್ಲಿದ್ದ ಅಸಮಾಧಾನ ಇದೀಗ ಶಮನವಾಗಿದ್ದು, ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ ಪ್ರಚಾರ ಕಾರ್ಯಕ್ಕೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಮ್ಮನ್ನು ಗುರುತಿಸುವುದಿಲ್ಲ, ನಮ್ಮನ್ನು ಮಾತನಾಡಿಸುವುದಿಲ್ಲ ಎಂದು ಅಳಲು ಕಾರ್ಯಕರ್ತರು ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ.

ಆದರೆ ಮಾನೆಯವರು ವಿಧಾನ ಪರಿಷತ್ ಸದಸ್ಯರಾಗಿ ಹಾವೇರಿಜಿಲ್ಲೆಯನ್ನು ಪ್ರತಿನಿಧಿಸುತ್ತಿರುವುದರಿಂದ ಹಾನಗಲ್ಲ ಕ್ಷೇತ್ರ ಅವರಿಗೆ ಹೊಸದಲ್ಲ, ಆದರೆ ಆ ಚುನಾವಣೆಯೇ ಬೇರೆ, ಸಾರ್ವತ್ರಿಕ ಚುನಾವಣೆಯ ಬೇರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಸಿಮೀತ ಮತದಾರರು ಇದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಲಕ್ಷಾಂತರ ಮತದಾರರು ಇದ್ದು, ಪ್ರತಿಗ್ರಾಮ ಹಾಗೂ ಪಟ್ಟಣಗಳಲ್ಲಿ ಇರುವ ಮುಖಂಡರನ್ನು ಕಾರ್ಯಕರ್ತರನ್ನು ಗುರುತಿಸುವುದು ಮಾನೆಅವರಿಗೆ ಸವಾಲಾಗಿದೆ.

ಇನ್ನು ಮಾನೆಯವರ ಬೆಂಬಲಕ್ಕೆ ಕಾಂಗ್ರೆಸ್‌ನ ಶಾಸಕ ಮನೋಹರ ತಹಶೀಲ್ದಾರ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ನಿಂತಿದ್ದು, ಮಾನೆಯವರನ್ನು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಪ್ರಚಾರ ನಡೆಸುತ್ತಿದ್ದಾರೆ.

Please follow and like us:
0
http://bp9news.com/wp-content/uploads/2018/05/WhatsApp-Image-2018-05-06-at-3.23.16-PM.jpeghttp://bp9news.com/wp-content/uploads/2018/05/WhatsApp-Image-2018-05-06-at-3.23.16-PM-150x150.jpegBP9 Bureauರಾಜಕೀಯಹಾವೇರಿಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೪೦ವರ್ಷಗಳಿಂದ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಕಾಂಗ್ರೆಸ್‌ನ ಮನೋಹರ ತಹಶೀಲ್ದಾರ, ಬಿಜೆಪಿಯ ಸಿ.ಎಂ.ಉದಾಸಿ ಅವರ ಮಧ್ಯ ನಡೆಯುತ್ತಿದ್ದ ಹಣಾ-ಹಣಿ ಪ್ರಸಕ್ತ ಚುನಾವಣೆಯಲ್ಲಿ ಕಂಡು ಬರುತ್ತಿಲ್ಲ. ಕಾರಣ ಕಾಂಗ್ರೆಸ್ ಅಭ್ಯರ್ಥಿ ಬದಲಾಗಿದ್ದಾರೆ. ತಹಶೀಲ್ದಾರ ಬದಲು ವಿಧಾನ ಪರಿಷತ್​​ ಸದಸ್ಯ ಶ್ರೀನಿವಾಸ ಮಾನೆ ಕಣದಲ್ಲಿದ್ದಾರೆ. ಬಿಜೆಪಿ ಯಿಂದ ಮಾಜಿ ಸಚಿವ ಸಿ.ಎಂ.ಉದಾಸಿ ಕಣದಲ್ಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ , ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ. ಹಾನಗಲ್ಲ ಕ್ಷೇತ್ರದ...Kannada News Portal