ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 2ರಂದು ಮಧ್ಯಾಹ್ನ 12ಕ್ಕೆ ಹಿರೇಕೆರೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2ಕ್ಕೆ ಬ್ಯಾಡಗಿಗೆ ಆಗಮಿಸಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಗುತ್ತಲ ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದು, ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಭಾಗ್ಯಗಳನ್ನು ನೀಡಿದ್ದಲ್ಲದೆ, ಸ್ಥಳೀಯ ಶಾಸಕರಿಗೆ ಹೆಚ್ಚಿನ ಅನುದಾನಗಳನ್ನು ನೀಡಿ ಶಾಸಕರ ಕ್ಷೇತ್ರಗಳ ಅಭಿವೃದ್ದಿಗೆ ಕಾರಣರಾಗಿದ್ದಾರೆ. ಈ ಕಾರಣಕ್ಕಾಗಿಯೇ ಜಿಲ್ಲೆಯ ಎಲ್ಲ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದು ಶಿವಣ್ಣನವರ ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ ಕ್ಷೇತ್ರದಲ್ಲಿ ಮುಜರಾಯಿ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ ಅವರು ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು, ಗುತ್ತಲ ಪಟ್ಟಣದಲ್ಲಿ ಕೆರೆಯನ್ನು ತುಂಬಿಸಿದ್ದರ ಪರಿಣಾಮ ಇಂದು ಗುತ್ತಲ ಪಟ್ಟಣದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಅಲ್ಲದೆ ನೆಗಳೂರ ಕೆರೆಯನ್ನು ಸಹ ತುಂಬಿಸಿದ್ದರಿಂದ ಅಲ್ಲಿಯೂ ಅಂತರ್ಜಲ ಮಟ್ಟ ಏರಿಕೆಯಾಗಿ ರೈತರಿಗೆ ಅನುಕೂಲವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ , ಮೇ೪ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿಗ್ಗಾಂವಿಗೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಿದರು.

ಹಾವೇರಿ ಕ್ಷೇತ್ರದಲ್ಲಿ ಈ ಸಲ ಅಧಿಕವಾಗಿ ಅಭಿವೃದ್ದಿಗೆ ಹಣ ನೀಡಿದ್ದೇವೆ. ಕ್ಷೇತ್ರದಲ್ಲಿ ಈ ಹಿಂದಿನ ಚುನಾವಣೆಗೂ ಮುನ್ನ ನಾನು ಮಾತುಕೊಟ್ಟಂತೆ ನಡೆದುಕೊಂಡು ಅಭಿವೃದ್ದಿ ಮಾಡಿದ್ದು ತೃಪ್ತಿ ತಂದಿದೆ. ಇನ್ನೂ ಅನೇಕ ಕಾರ್ಯಗಳಿಗೆ ಈಗಾಗಲೇ ಚಾಲನೆ ನೀಡಿದ್ದು ಮುಂದಿನ ದಿನಗಳಲ್ಲಿ ಅವು ಅನುಷ್ಠಾನಕ್ಕೆ ಬರಲಿವೆ ಎಂದ ರುದ್ರಪ್ಪ ಲಮಾಣಿ ತಿಳಿಸಿದರು.

Please follow and like us:
0
http://bp9news.com/wp-content/uploads/2018/05/WhatsApp-Image-2018-05-01-at-11.52.56-AM.jpeghttp://bp9news.com/wp-content/uploads/2018/05/WhatsApp-Image-2018-05-01-at-11.52.56-AM-150x150.jpegBP9 Bureauರಾಜಕೀಯಹಾವೇರಿಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 2ರಂದು ಮಧ್ಯಾಹ್ನ 12ಕ್ಕೆ ಹಿರೇಕೆರೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2ಕ್ಕೆ ಬ್ಯಾಡಗಿಗೆ ಆಗಮಿಸಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು. ಗುತ್ತಲ ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದು, ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಭಾಗ್ಯಗಳನ್ನು ನೀಡಿದ್ದಲ್ಲದೆ, ಸ್ಥಳೀಯ ಶಾಸಕರಿಗೆ ಹೆಚ್ಚಿನ ಅನುದಾನಗಳನ್ನು ನೀಡಿ ಶಾಸಕರ ಕ್ಷೇತ್ರಗಳ ಅಭಿವೃದ್ದಿಗೆ ಕಾರಣರಾಗಿದ್ದಾರೆ....Kannada News Portal