ತುಮಕೂರು: ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರಯ ಅಧ್ಯಕ್ಷರಾದ ಅಮಿತ್ ಶಾ ಅವರು ಪ್ರಚಾರಕ್ಕೆ ಬಾರದೆ ಇದ್ದಿದ್ದರೆ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಅವರ ಪ್ರಚಾರದಿಂದಲೇ ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಗಳಿಸಲು ಸಾಧ್ಯವಾಯಿತುಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ನಾನು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ಕಳೆದ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ನಾನು ಅಷ್ಟು ಸುಲಭವಾಗಿ ಬಿಡುವುದಿಲ್ಲ, ಪಕ್ಷದಲ್ಲಿ ಯಾರು ಏನೇನು ಮಾಡಿದ್ದಾರೆ ಎಂಬುದು ಹೈಕಮಾಂಡ್ ಪರಿಶೀಲಿಸಲಿದೆ. ಪ್ರಸಕ್ತ ರಾಜ್ಯದಲ್ಲಿ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ನಂತರ ಚುನಾವಣೆ ಸಿದ್ಧತೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ನಾನು ಶಾಸಕನಾಗಿದ್ದ ಅವಧಿಯಲ್ಲಿ ನಗರ ಸೇರಿದಂತೆ ಜಿಲ್ಲೆಯ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತುಮಕೂರು ಗ್ರಾಮಾಂತರ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬಂದಿದ್ದವು, ಈ ಬಾರಿ ತುಮಕೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ. ಹೊಸ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಜಿಲ್ಲಾಧ್ಯಕ್ಷರು ಮತ್ತು ಮಾಜಿ ಸಂಸದರು ವಿಫಲರಾಗಿದ್ದಾರೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ನನ್ನ ಅವಧಿಯಲ್ಲಿ ಕುಣಿಗಲ್, ಮಧುಗಿರಿ, ಸಿರಾ, ಗುಬ್ಬಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 15 ರಿಂದ 16 ಸಾವಿರ ಮತಗಳು ಪಡೆದಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಕೇತ್ರಗಳ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುವಷ್ಟರ ಮಟ್ಟಿಗೆ ತಂದಿದ್ದಾರೆ ಎಂದು ಆರೋಪಿಸಿದರು

ತುಮಕೂರು ನಗರದಲ್ಲಿ ಹಿಂದಿನ ಕಾಂಗ್ರೆಸ್ ಶಾಸಕರಾಗಿದ್ದ ಡಾ.ರಫೀಕ್ ಅಹಮದ್ ಆಡಳಿತದಿಂದ ಬೇಸತ್ತ ನಗರದ ಜನತೆ ಈ ಬಾರಿ ಒಂದಾಗಿ ಬಿಜೆಪಿಗೆ ಮತ ನೀಡಿ ಅಭ್ಯರ್ಥಿ ಗೆಲ್ಲಲು ಕಾರಣವೇ ಹೊರತು, ಜಿಲ್ಲಾಧ್ಯಕ್ಷರ ಶ್ರಮ ಏನೂ ಇಲ್ಲ ಎಂದರು

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ತಕ್ಷಣವೇ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಗರದಲ್ಲಿ ದಿನೇ ದಿನೇ ದರೋಡೆ, ಕಳ್ಳತನ ಪ್ರಕರಣಗಳು ಮಿತಿ ಮೀರಿವೆ. ಇದಕ್ಕೆ ಪೊಲೀಸರ ವೈಫಲ್ಯವೂ ಪ್ರಮುಖ ಕಾರಣವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸ್ಮಾರ್ಟ್ ಸಿಟಿ ಎಂಬ ಹೆಸರಿನಲ್ಲಿ ನಗರದ ಸಿಎಸ್‍ಐ ಬಡಾವಣೆ ಮತ್ತು ಕ್ಯಾತ್ಸಂದ್ರದಲ್ಲಿ ಒಂಟಿ ಮಹಿಳೆ ಹಾಗೂ ವೃದ್ದರು ವಾಸಿಸುವ ಮನೆಗಳನ್ನು ಗುರಿಯಾಗಿರಿಸಿಕೊಂಡು ದರೋಡೆ ಮಾಡಲಾಗಿದೆ. ಏನಾದರು ಕೊಲೆ ಮಾಡಿ ದರೋಡೆ ಮಾಡಿದ್ದರೆ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದರು.

ಮೊನ್ನೆಯಷ್ಟೇ ಟೂಡಾ ಮಾಜಿ ಅಧ್ಯಕ್ಷ ಎಸ್.ಆರ್.ಶ್ರೀಧರಮೂರ್ತಿ ಅವರ ಫೈನಾನ್ಸ್ ಅಂಗಡಿಯಲ್ಲೂ ಕಳ್ಳತನ ನಡೆದಿದೆ. ಆದ್ದರಿಂದ ನಗರದಲ್ಲಿ ಪೊಲೀಸ್ ವ್ಯವಸ್ಥೆ ಬಿಗಿಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾ ಗೋಪಿನಾಥ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ಮಹೇಶ್, ಲಕ್ಷ್ಮೀನರಸಿಂಹರಾಜು, ನಂಜುಂಡಪ್ಪ, ಜಯಸಿಂಹ, ಶಾಂತರಾಜು, ಬನಶಂಕರಿಬಾಬು, ಕೆ. ಹರೀಶ್, ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.

Please follow and like us:
0
http://bp9news.com/wp-content/uploads/2018/06/sogadushivanna-1524729533.jpghttp://bp9news.com/wp-content/uploads/2018/06/sogadushivanna-1524729533-150x150.jpgBP9 Bureauತುಮಕೂರುಪ್ರಮುಖI am the Lok Sabha Ticket Achievement: Nice Shiva !!!!!ತುಮಕೂರು: ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರಯ ಅಧ್ಯಕ್ಷರಾದ ಅಮಿತ್ ಶಾ ಅವರು ಪ್ರಚಾರಕ್ಕೆ ಬಾರದೆ ಇದ್ದಿದ್ದರೆ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಅವರ ಪ್ರಚಾರದಿಂದಲೇ ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಗಳಿಸಲು ಸಾಧ್ಯವಾಯಿತುಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ನಾನು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ಕಳೆದ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ನಾನು ಅಷ್ಟು ಸುಲಭವಾಗಿ...Kannada News Portal